Prithvi Shaw: ಕಳೆದ ವರ್ಷ ಫೆಬ್ರವರಿಯಲ್ಲಿ ಮುಂಬೈ ನಗರದ ಅಂಧೇರಿ ಪ್ರದೇಶದ ಪಬ್ನಲ್ಲಿ ಸಪ್ನಾ ಗಿಲ್ ಮತ್ತು ಪೃಥ್ವಿ ಶಾ ನಡುವಿನ ಜಗಳಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಬೇಸ್ ಬಾಲ್ ಬ್ಯಾಟ್ ನಿಂದ ಶಾ ಅವರ ಕಾರಿನ ಮೇಲೆ ದಾಳಿ ಮಾಡಿದ ಆರೋಪದ ಮೇಲೆ ಸಪ್ನಾ ಗಿಲ್ ಅವರನ್ನು ಬಂಧಿಸಲಾಗಿತ್ತು. ನಂತರ, ಅವರು ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಆಟಗಾರನ ವಿರುದ್ಧ ಆಕೆ ಲೈಂಗಿಕ ಕಿರುಕುಳದ ಆರೋಪಗಳನ್ನು ಮಾಡಿದ್ದರು.
ಬೆಂಗಳೂರು, ಏಪ್ರಿಲ್ 04 : ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿ ಬ್ಯಾಟರ್ ಪೃಥ್ವಿ ಶಾ (Prithvi Shaw) ಮತ್ತು ಸಪ್ನಾ ಗಿಲ್ (Sapna GIll) ಪ್ರಕರಣವು ಹೊಸ ತಿರುವುದ ಪಡೆದುಕೊಂಡಿದ್ದು, ಸ್ಥಳೀಯ ಮುಂಬೈ ನ್ಯಾಯಾಲಯವು ಈ ಬಗ್ಗೆ ತನಿಖೆ ನಡೆಸಿ ಜೂನ್ 19 ರೊಳಗೆ ವರದಿ ಸಲ್ಲಿಸುವಂತೆ ಮುಂಬೈ ಪೊಲೀಸರಿಗೆ ನಿರ್ದೇಶನ ನೀಡಿದೆ. ಸೋಶಿಯಲ್ ಮೀಡಿಯಾ ಇನ್ಫ್ಲ್ಯುಯೆನ್ಸರ್ ಸಪ್ನಾ ಗಿಲ್, ಪೃಥ್ವಿ ಶಾ ವಿರುದ್ಧ ಲೈಂಗಿಕ ಕಿರುಕುಳದ ಕೇಸನ್ನು ನ್ಯಾಯಾಲಯದಲ್ಲಿ ದಾಖಲಿಸಿದ್ದಾರೆ. ಇದೀಗ ನ್ಯಾಯಾಲಯ ತನಿಖೆಗೆ ಆದೇಶ ಹೊರಡಿಸಿದೆ.
ಕಳೆದ ವರ್ಷ ಫೆಬ್ರವರಿಯಲ್ಲಿ ಮುಂಬೈ ನಗರದ ಅಂಧೇರಿ ಪ್ರದೇಶದ ಪಬ್ನಲ್ಲಿ ಸಪ್ನಾ ಗಿಲ್ ಮತ್ತು ಪೃಥ್ವಿ ಶಾ ನಡುವಿನ ಜಗಳಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಬೇಸ್ ಬಾಲ್ ಬ್ಯಾಟ್ ನಿಂದ ಶಾ ಅವರ ಕಾರಿನ ಮೇಲೆ ದಾಳಿ ಮಾಡಿದ ಆರೋಪದ ಮೇಲೆ ಸಪ್ನಾ ಗಿಲ್ ಅವರನ್ನು ಬಂಧಿಸಲಾಗಿತ್ತು. ನಂತರ, ಅವರು ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಆಟಗಾರನ ವಿರುದ್ಧ ಆಕೆ ಲೈಂಗಿಕ ಕಿರುಕುಳದ ಆರೋಪಗಳನ್ನು ಮಾಡಿದ್ದರು.
ಶಾ ಪ್ರಸ್ತುತ ಐಪಿಎಲ್ 2024 ರಲ್ಲಿ ನಿರತರಾಗಿದ್ದಾರೆ. ಅವರು ಪಂದ್ಯಾವಳಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸದಸ್ಯರಾಗಿದ್ದಾರೆ. ಬಲಗೈ ಬ್ಯಾಟ್ಸ್ಮನ್ ಐಪಿಎಲ್ 2024 ರಲ್ಲಿ ಡಿಸಿ ಪರ 3 ಪಂದ್ಯಗಳಲ್ಲಿ 2 ಪಂದ್ಯಗಳನ್ನು ಆಡಿದ್ದಾರೆ. ಅವರು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 42 ರನ್ ಗಳಿಸಿದರು. ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಹಿಂದಿನ ಪಂದ್ಯದಲ್ಲಿ ಡಿಸಿ ಓಪನರ್ 10 ರನ್ಗಳಿಗೆ ಔಟಾಗಿದ್ದರು.