ಲೋಕಸಭೆ ಚುನಾವಣೆ 2024: ಬೂತ್ ಅಧ್ಯಕ್ಷರೊಂದಿಗೆ ಇಂದು ಪ್ರಧಾನಿ ಮೋದಿ ಸಂವಾದ

​Lok Sabha Election: ರಾಜ್ಯದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮುಕ್ತಾಯಗೊಂಡ ಬೆನ್ನಲ್ಲೆ ಪ್ರಧಾನಿ ನರೇಂದ್ರ ಮೋದಿಯವರು ಇಂದು (ಶುಕ್ರವಾರ ಏ.05) ಬಿಜೆಪಿ ಬೂತ್​ ಅಧ್ಯಕ್ಷರ ಜೊತೆ “ನಮೋ ಆ್ಯಪ್​​” ಮೂಲಕ ಸಂವಾದ ನಡೆಸಲಿದ್ದಾರೆ.

ಬೆಂಗಳೂರು, ಏಪ್ರಿಲ್​ 05: ಲೋಕಸಭೆ ಚುನಾವಣೆಗೆ (Lok Sabha Election 2024) ಬಿಜೆಪಿ ಭರ್ಜರಿಯಾಗಿಯೇ ತಯಾರಿ ನಡೆಸುತ್ತಿದೆ. ಈ ಬಾರಿ 400ಕ್ಕಿಂತ ಅಧಿಕ ಕ್ಷೇತ್ರಗಳಲ್ಲಿ ಗೆಲ್ಲುವ ಗುರಿ ಹೊಂದಿರುವ ಎನ್​ಡಿಎ ನಾನಾ ತಂತ್ರಗಳನ್ನು ಮಾಡುತ್ತಿದೆ. ಬಿಜೆಪಿ (BJP) ಪಾಲಿಗೆ ಪ್ರಧಾನಿ ಮೋದಿ ಸ್ಟಾರ್​​ ಪ್ರಚಾರಕರು. ಮೋದಿ ಹೆಸರು ಬಿಜೆಪಿಗೆ ಮತಬುಟ್ಟಿಯಾಗಿದೆ. ರಾಜ್ಯದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮುಕ್ತಾಯಗೊಂಡ ಬೆನ್ನಲ್ಲೆ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಇಂದು (ಶುಕ್ರವಾರ ಏ.05) ಬಿಜೆಪಿ ಬೂತ್​ ಅಧ್ಯಕ್ಷರ ಜೊತೆ “ನಮೋ ಆ್ಯಪ್​​” ಮೂಲಕ ಸಂವಾದ ನಡೆಸಲಿದ್ದಾರೆ.

ಬೂತ್ ಅಧ್ಯಕ್ಷರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂಜೆ 4.30ಕ್ಕೆ ಸಂವಾದ ನಡೆಸಲಿದ್ದಾರೆ. ಈ ಸಂವಾದದಲ್ಲಿ ಬೂತ್​ ಅಧ್ಯಕ್ಷರು ಮಾತ್ರವಲ್ಲದೆ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ, ಕೋರ್​ಕಮಿಟಿ ಸದ್ಯರು, ಲೋಕಸಭಾ ಅಭ್ಯರ್ಥಿಗಳು ಮತ್ತು ಶಾಸಕರು ಭಾಗವಹಿಸಲಿದ್ದಾರೆ.

ಬಿಜೆಪಿ ವಿಶ್ವದಲ್ಲಿ ಅತಿ ಹೆಚ್ಚು ಕಾರ್ಯಕರನ್ನು ಹೊಂದಿರುವ ಪಕ್ಷ. ಬಿಜೆಪಿಗೆ ಕಾರ್ಯಕರ್ತರೇ ಜೀವಾಳವಾಗಿದ್ದಾರೆ. ಇನ್ನು ಬಿಜೆಪಿಯಲ್ಲಿ ಕಾರ್ಯಕರ್ತರು ಮತ್ತು ಬೂತ್​ ಮಟ್ಟದ ಅಧ್ಯಕ್ಷರಿಗೆ ಹೆಚ್ಚಿನ ಮಣ್ಣನೆ ನೀಡಲಾಗುತ್ತದೆ. ಬೂತ್​​​ಗಳು ಬಲಶಾಲಿಯಾಗಿದ್ದರೆ ಗೆಲವು ಸುಲಭ ಎಂಬ ಅಭಿಪ್ರಾಯವಿದೆ. ಹೀಗಾಗಿ ಪ್ರಧಾನಿ ಮೋದಿಯವರು ಲೋಕಸಭಾ ಚುನಾವಣೆಗೆ ಕೈಗೊಳ್ಳಬೇಕಾಗಿರುವ ಪ್ರಚಾರದ ಕುರಿತು ಬೂತ್​ ಅಧ್ಯಕ್ಷರಿಗೆ ಸಲಹೆ, ಸೂಚನೆ ನೀಡಲಿದ್ದಾರೆ.

ರಾಜ್ಯದಲ್ಲಿ ಮೋದಿ ಆದಿಯಾಗಿ ಸ್ಟಾರ್​ ಪ್ರಚಾರಕರ ರೌಂಡ್ಸ್​​
ರಾಜ್ಯ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿತ್ತು. ನರೇಂದ್ರ ಮೋದಿ, ನಡ್ಡಾ ಸೇರಿದಂತೆ ಕೇಂದ್ರ ಸಚಿವರು, ಕರ್ನಾಟಕದ ಮೂವರು ಮಾಜಿ ಸಿಎಂಗಳು ಸ್ಟಾರ್​ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

ಬಿಜೆಪಿ ಸ್ಟಾರ್​ ಪ್ರಚಾರಕರ ಪಟ್ಟಿ ಇಂತಿದೆ
ನರೇಂದ್ರ ಮೋದಿ, ಜಗತ್ ಪ್ರಕಾಶ್ ನಡ್ಡಾ, ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಎಸ್.ಜೈಶಂಕರ್, ನಿರ್ಮಲಾ ಸೀತಾರಾಮನ್, ಪ್ರಹ್ಲಾದ್ ಜೋಶಿ, ಸ್ಮೃತಿ ಇರಾನಿ, ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಆರ್.ಅಶೋಕ್, ಕೆ.ಅಣ್ಣಾಮಲೈ, ರಾಧಾಮೋಹನ ದಾಸ್ ಅಗರ್ವಾಲ್, ಯೋಗಿ ಆದಿತ್ಯನಾಥ್, ಹಿಮಂತ್ ಬಿಸ್ವಾ ಶರ್ಮಾ, ಪ್ರಮೋದ್ ಸಾವಂತ್, ಫಡ್ನವಿಸ್, ಬಸವರಾಜ ಬೊಮ್ಮಾಯಿ, ಸುಧಾಕರ ರೆಡ್ಡಿ, ಸದಾನಂದಗೌಡ, ಜಗದೀಶ್ ಶೆಟ್ಟರ್, ನಳಿನ್ ಕುಮಾರ್ ಕಟೀಲು, ಸಿ.ಟಿ.ರವಿ, ಗೋವಿಂದ ಕಾರಜೋಳ, ಅಶ್ವತ್ಥ್ ನಾರಾಯಣ, ಬಿ.ಶ್ರೀರಾಮುಲು, ಅರವಿಂದ ಲಿಂಬಾವಳಿ, ವಿ.ಸುನೀಲ್ ಕುಮಾರ್, ಜಿ.ವಿ.ರಾಜೇಶ್, ಪಿ.ರಾಜೀವ್, ಪ್ರೀತಂಗೌಡ, ಬಸನಗೌಡ ಪಾಟೀಲ್ ಯತ್ನಾಳ್, ಭೈರತಿ ಬಸವರಾಜ್, ಪ್ರಮೋದ್ ಮಧ್ವರಾಜ್, ಪ್ರತಾಪ್ ಸಿಂಹ, ಛಲವಾದಿ ನಾರಾಯಣಸ್ವಾಮಿ, ಎನ್.ಮಹೇಶ್​ಗೆ ಸ್ಟಾರ್​ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ.