ಸಿಎಂ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ನಿತೀಶ್ ಕುಮಾರ್.! ಬಿಹಾರದಲ್ಲಿ ಬಿಜೆಪಿಗೆ ಬಿಗ್ ಶಾಕ್.!

ಬಿಹಾರ: ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜಿನಾಮೆ ಸಲ್ಲಿಸಿದ್ದಾರೆ. ಬಿಜೆಪಿ ಜೊತೆಗಿನ ಸಂಬಂಧವನ್ನ ಮತ್ತೊಮ್ಮೆ ಮುರಿದುಕೊಂಡಿದ್ದಾರೆ. ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ಇಂದು ಸಂಜೆ 4 ಗಂಟೆಗೆ ರಾಜ್ಯಪಾಲ ಫಾಗು ಚೌಹಾಣ್ ಅವರನ್ನು ಭೇಟಿಯಾಗಿ ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ಪಕ್ಷದ ಎಲ್ಲಾ ಸಂಸದರು ಮತ್ತು ಶಾಸಕರು ಎನ್‌ಡಿಎ ತೊರೆಯುವ ನಿರ್ಧಾರಕ್ಕೆ ಒಮ್ಮತ ವ್ಯಕ್ತಪಡಿಸಿದ್ದಾರೆ ಎಂದು ರಾಜೀನಾಮೆ ಸಲ್ಲಿಸಿದ ನಂತರ ಹೇಳಿದ್ದಾರೆ.