ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ – 2nd PUC Result

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1 ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಪೂರ್ಣಗೊಂಡಿದ್ದು, ನಾಳೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ‌.

ಮಾರ್ಚ್ 2024ರ ದ್ವಿತೀಯ ಪಿಯುಸಿ ಪರೀಕ್ಷೆ-1 ನ್ನು ದಿನಾಂಕ:01/03/2024 ರಿಂದ 22/03/2024 ರವರೆಗೆ ನಡೆಸಲಾಗಿದ್ದು, ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ನಾಳೆ ಬೆಳಗ್ಗೆ ಫಲಿತಾಂಶ ಪ್ರಕಟಿಸಲಾಗುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ನಾಳೆ ಬೆಳಗ್ಗೆ 10:00 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆದಿದ್ದು, ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ನಾಳೆ ಬೆಳಗ್ಗೆ 11:00 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.