ಕೆನರಾ ಎಕ್ಸಲೆನ್ಸ ಗೋರೆ ಕಾಲೇಜ್‌ – ದ್ವಿತೀಯ ಪಿಯುಸಿಯಲ್ಲಿ ಶೇ.100 ಫಲಿತಾಂಶ

ಕುಮಟಾ, ಏಪ್ರಿಲ್‌ 12 : ಉತ್ತರಕನ್ನಡ ಜಿಲ್ಲೆಯ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ಗೋರೆಯ ಕೆನರಾ ಎಕ್ಸಲೆನ್ಸ್ ಪಿಯು ಕಾಲೇಜಿನಲ್ಲಿ ಸತತ 2ನೇ ವರ್ಷವೂ ಪ್ರತಿಶತ 100 ರಷ್ಟು ಫಲಿತಾಂಶ ದಾಖಲಾಗಿದೆ. ವಿಜ್ಞಾನ ವಿಭಾಗದಲ್ಲಿ 79 ವಿದ್ಯಾರ್ಥಿಗಳಲ್ಲಿ, 61 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 18 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ಇನ್ನು ವಾಣಿಜ್ಯ ವಿಭಾಗಕ್ಕೆ ಸಂಬಂಧಿಸಿದಂತೆ, ಒಟ್ಟೂ 16 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 10 ವಿದ್ಯಾರ್ಥಿಗಳು ಡಿಸ್ಟಿಂಕ್ಷನಲ್ಲಿ, 6 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಕುಮಾರ್ ಎಸ್ ಭಟ್ 600 ಕ್ಕೆ 590 ಅಂಕಗಳನ್ನು ಪಡೆದು ರಾಜ್ಯಕ್ಕೆ 9 ನೇ ಸ್ಥಾನ ಹಾಗೂ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾನೆ. ಪೂಜಾ ಅವಧಾನಿ 586 ಅಂಕ ಪಡೆದು ದ್ವಿತೀಯ ಸ್ಥಾನ ಹಾಗೂ ಪ್ರೇರಣಾ ಹೆಗಡೆ 580 ಅಂಕಗಳನ್ನು ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.  ವಾಣಿಜ್ಯ ವಿಭಾಗದಲ್ಲಿ ಸಿರಿ ಮಹೇಶ್ ಹೆಗಡೆ 579 ಅಂಕ ಪಡೆದು ಪ್ರಥಮ ಸ್ಥಾನ ಪಡೆದರೆ, ಧನ್ಯಾ ಭಟ್ 575 ಅಂಕ ಪಡೆದು ದ್ವಿತೀಯ ಸ್ಥಾನ ಮತ್ತು ಕೌಶಿಕ್ ಎಮ್ ಭಟ್ 568 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.

ಇನ್ನು ಗಣಿತ ಶಾಸ್ತ್ರದಲ್ಲಿ 9, ಸಂಸ್ಕೃತದಲ್ಲಿ 4, ಜೀವಶಾಸ್ತ್ರದಲ್ಲಿ ಹಾಗೂ ಗಣಕ ವಿಜ್ಞಾನದಲ್ಲಿ 3, ರಸಾಯನ ಶಾಸ್ತ್ರದಲ್ಲಿ 2 ವಿದ್ಯಾರ್ಥಿಗಳು 100 ಕ್ಕೆ 100 ಅಂಕ ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಜಿ.ಜಿ.ಹೆಗಡೆ, ಪ್ರಾಚಾರ್ಯರಾದ ಡಿ.ಎನ್‌.ಭಟ್‌ ಹಾಗೂ ಎಲ್ಲಾ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.