ಹುಬ್ಬಳ್ಳಿ, ಏಪ್ರಿಲ್ 19: ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ಕೊಲೆ ವೈಯಕ್ತಿಕ ಕಾರಣಕ್ಕೆ ಆಗಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ನೇಹಾ ತಂದೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯ ನಿರಂಜನ್ ಹಿರೇಮಠ ವಿರೋಧ ವ್ಯಕ್ತಪಡಿಸಿದ್ದಾರೆ. ಇದು ವೈಯಕ್ತಿಕ ಕಾರಣಕ್ಕೆ ಆಗಿರುವ ಕೊಲೆ ಅಲ್ಲ. ನಾನು ಕಾರ್ಪೊರೇಟರ್, ನನಗೆ ಹೀಗಾದರೆ ಬೇರೆಯವರ ಕಥೆ ಏನು? ಮುಖ್ಯಮಂತ್ರಿ ಸಿದ್ದರಾಮಯ್ಯ ಯಾಕೆ ಹೀಗೆ ಹೇಳಿಕೆ ನೀಡುತ್ತಿದ್ದಾರೆ. ನಮಗೂ ಅವರ ಕುಟುಂಬಕ್ಕೂ ಏನು ಸಂಬಂಧ? ತನಿಖೆ ದಿಕ್ಕು ತಪ್ಪಿಸಬೇಡಿ, ಇದು ವೈಯಕ್ತಿಕ ಕಾರಣಕ್ಕೆ ಆದ ಹತ್ಯೆಯಲ್ಲ ಎಂದು ನೇಹಾ ತಂದೆ ನಿರಂಜನ್ ಹಿರೇಮಠ ಆಕ್ರೋಶ ವ್ಯಕ್ತಪಡಿಸಿದ್ದಾರೆ.