ಹುಬ್ಬಳ್ಳಿ, ಏಪ್ರಿಲ್ 21: ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಗೇಡಿಗಳು ಇನ್ಸ್ಟ್ಗ್ರಾಮ್ನಲ್ಲಿ ಫಯಾಜ್ನೇಹಾ ಎಂಬ ಹೆಸರಿನಲ್ಲಿ ಅಕೌಂಟ್ ಓಪನ್ ಮಾಡಿ, ಕೊಲೆ ಆರೋಪಿ ಫಯಾಜ್ ಮತ್ತು ನೇಹಾ ಜೊತೆಗಿರುವ ಫೋಟೋ, ವಿಡಿಯೋಗಳನ್ನು ಪೋಸ್ಟ್ ಮಾಡಿದ್ದಾರೆ. ಅಲ್ಲದೆ “ನೇಹಾ, ಫಯಾಜ್ ಅವರದ್ದು ನಿಜವಾದ ಪ್ರೀತಿ, ಪ್ರೀತಿಗೆ ನ್ಯಾಯ ಕೊಡಿಸಿ” ಎಂದು ಇಂಗ್ಲಿಷ್ನಲ್ಲಿ ಬರೆದಿದ್ದಾರೆ. ಕಿಡಿಗೇಡಿಗಳು ಈ ರೀತಿಯಾಗಿ ಇಬ್ಬರ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ, ತನಿಖೆಯ ಹಾದಿ ತಪ್ಪಿಸಲು ಮುಂದಾಗಿದ್ದಾರಾ ಎಂಬ ಪ್ರಶ್ನೆ ಮೂಡಿದೆ.
ಈ ಬಗ್ಗೆ ನೇಹಾ ತಂದೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ್ ಹಿರೇಮಠ ಮಾತನಾಡಿ, ಹಂತಕನ ಬೆನ್ನಿಗೆ ನಿಂತು ನನ್ನ ಮಗಳ ಮೇಲೆ ಅಪವಾದ ಹೊರಿಸುತ್ತಿದ್ದಾರೆ. ಹುಬ್ಬಳ್ಳಿ-ಧಾರವಾಡ ಪೊಲೀಸರು ಎಚ್ಚೆತ್ತಕೊಂಡು ಕ್ರಮ ಕೈಗೊಳ್ಳಬೇಕು. ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡು ನನ್ನ ಪುತ್ರಿಯ ಸಾವಿಗೆ ನ್ಯಾಯ ಕೊಡಿ. ಇಲ್ಲದಿದ್ದರೆ ನಾನೇ ಸೈಬರ್ ಠಾಣೆಗೆ ದೂರು ನೀಡುತ್ತೇನೆ ಎಂದು ಹೇಳಿದರು.
ಫಯಾಜ್ನನ್ನು ಬಂಧಿಸಿದ ಪೊಲೀಸರಿಗೆ ಪ್ರಶಂಸನಾ ಪತ್ರ
ನೇಹಾರನ್ನು ಕೊಲೆ ಮಾಡಿದ ಆರೋಪಿ ಫಯಾಜ್ನನ್ನು ಒಂದೇ ಗಂಟೆಯಲ್ಲಿ ಬಂಧಿಸಿದ ಪೊಲೀಸ್ ತಂಡಕ್ಕೆ ಕಾಪ್ ಆಫ್ ದಿ ಮಂತ್ ಅವಾರ್ಡ ನೀಡಿ ಗೌರವಿಸಲಾಗಿದೆ. ಪೊಲೀಸ್ ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ, 25 ಸಾವಿರ ರೂಪಾಯಿ ಬಹುಮಾನ ನೀಡಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ರೇಣುಕಾ ಸುಕುಮಾರ ಶ್ಲಾಘನೆ ವ್ಯಕ್ತಪಡಿಸಿದರು.