ಲೈಂಗಿಕ ದೌರ್ಜನ್ಯ ಆರೋಪ: ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್​ ರೇವಣ್ಣ ಅವರನ್ನು ಜೆಡಿಎಸ್​ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಈ ಬಗ್ಗೆ ಸ್ವತಃ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್​ಡಿ ಕುಮಾರಸ್ವಾಮಿ ಖಚಿತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ,  ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ರನ್ನು ಉಚ್ಚಾಟಿಸಲಾಗಿದೆ. ಯಾರು ಎಲ್ಲಿ ಹೋಗುತ್ತಾರೆ ಎಂದು ಕಾಯಲು ಆಗುತ್ತಾ ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು. ನಾವೇ ಹೇಳುತ್ತಿದ್ದೇವಲ್ಲಾ, ಸಮಗ್ರ ತನಿಖೆ ಆಗಬೇಕೆಂದು. ಬಿಜೆಪಿಗೂ ಇದಕ್ಕೂ ಯಾವುದೇ ರೀತಿ ಸಂಬಂಧ ಇಲ್ಲ. ನನಗೂ ಈ ಘಟನೆಗೂ ಯಾವುದೇ ಸಂಬಂಧ ಇಲ್ಲ. ನನ್ನ, ನನ್ನ ತಂದೆ ಬಗ್ಗೆ ಸಂಶಯ ಪಡಬೇಡಿ ಎಂದು ಸ್ಪಷ್ಟಪಡಿಸಿದರು.

ಹಾಸನದಲ್ಲಿ ಗೆದ್ರೆ ಸಂಸದ ಸ್ಥಾನ ಏನಾಗಲಿದೆ?

ಹಾಸನ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಗೆದ್ದರೆ ಸಂಸದ ಸ್ಥಾನದಲ್ಲಿ ಮುಂದುವರಿಯುತ್ತಾರೆ. ಆದರೆ ದೂರು ಕೊಟ್ಟವರು, ತನಿಖಾಧಿಕಾರಿಗಳು ಕೋರ್ಟ್‌ನಲ್ಲಿ ಆರೋಪ ಸಾಬೀತು ಪಡಿಸುವುದು ಬಹಳ ಮುಖ್ಯವಾಗಿದೆ. ಕೋರ್ಟ್‌ನಲ್ಲಿ ಪ್ರಜ್ವಲ್ ರೇವಣ್ಣ ತಪ್ಪಿತಸ್ಥ ಎಂದು ಸಾಬೀತು ಮಾಡಿದರೆ ಪ್ರಜಾಪ್ರತಿನಿಧಿ ಕಾಯ್ದೆಯ ಅಡಿ ಸಂಸದ ಸ್ಥಾನದಿಂದ ವಜಾಗೊಳಿಸುವ ಸಾಧ್ಯತೆ ಇದೆ. ಇನ್ನು ಪ್ರಜ್ವಲ್ ರೇವಣ್ಣ ಅವರು ಹಾಸನ ಲೋಕಸಭಾ ಚುನಾವಣೆಯಲ್ಲಿ ಗೆದ್ದರೂ ಜೆಡಿಎಸ್ ಪಕ್ಷ ತನಿಖೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದರೂ ನೀಡಬಹುದು.

ಮುಜುಗರದಿಂದ ತಪ್ಪಿಸಿಕೊಳ್ಳುವ ಪ್ರಯತ್ನ

ಹಾಸನದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸೋತರೆ ಅಶ್ಲೀಲ ವಿಡಿಯೋ ಪ್ರಕರಣದ ವಿಚಾರಣೆಯನ್ನು ಎದುರಿಸಬೇಕಾಗುತ್ತೆ. ಒಂದು ವೇಳೆ ಲೋಕಸಭಾ ಚುನಾವಣೆಯಲ್ಲಿ ಗೆದ್ದರೂ ಪ್ರಜ್ವಲ್ ರೇವಣ್ಣ ಅವರ ಸಂಸದ ಸ್ಥಾನಕ್ಕೆ ಕುತ್ತು ಬರಲಿದೆ. ಚುನಾವಣೆಯಲ್ಲಿ ಗೆದ್ದರೆ ಪ್ರಜ್ವಲ್ ರೇವಣ್ಣ ಅವರು ಸಂಸದರಾಗಿ ಮುಂದುವರಿಯುತ್ತಾರೆ. ಆದರೆ ಪ್ರಜ್ವಲ್ ರೇವಣ್ಣ ಅವರ ಮೇಲೆ SIT ತನಿಖೆ ನಡೆಯುತ್ತಿರುವುದರಿಂದ ಜೆಡಿಎಸ್‌ ಪಕ್ಷವೇ ರಾಜೀನಾಮೆ ನೀಡುವಂತೆ ಸೂಚಿಸುವ ಸಾಧ್ಯತೆ ಇದೆ. ವಿಡಿಯೋ ಪ್ರಕರಣದಲ್ಲಿ ಮೇಲ್ನೋಟಕ್ಕೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಿ ಸದ್ಯಕ್ಕೆ ಮುಜುಗರದಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದೆ.