ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣ ಜೆಡಿಎಸ್ ಶಾಸಕ, ಮಾಜಿ ಸಚಿವ ಹೆಚ್ಡಿ ರೇವಣ್ಣಗೆ ಉರುಳಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತಗೊಂಡ ಬೆನ್ನಲ್ಲೇ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ದೇವೇಗೌಡರ ನಿವಾಸದಿಂದ ರೇವಣ್ಣರನ್ನು ವಿಶೇಷ ತನಿಖಾ ತಂಡದ ಅಧಿಕಾರಿಗಳು ಬಂಧಿಸಿದ್ದಾರೆ.
ಬೆಂಗಳೂರು, ಮೇ 4: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಜೆಡಿಎಸ್ ಶಾಸಕ ಹೆಚ್ಡಿ ರೇವಣ್ಣರನ್ನು (HD Revanna) ವಿಶೇಷ ತನಿಖಾ ದಳದ (SIT) ಅಧಿಕಾರಿಗಳು ಶನಿವಾರ ಸಂಜೆ ವಶಕ್ಕೆ ಪಡೆದರು. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ನಿವಾಸದಿಂದ ರೇವಣ್ಣರನ್ನು ವಶಕ್ಕೆ ಪಡೆದ ಅಧಿಕಾರಿಗಳು ನೇರವಾಗಿ ಎಸ್ಐಟಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ದಾಖಲಾದ ಅಪಹರಣ, ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣರನ್ನು ಎಸ್ಐಟಿ ವಶಕ್ಕೆ ಪಡೆದಿದೆ.