ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿದ ಕೋರ್ಟ್!

ನವದೆಹಲಿ, ಮೇ 10 : ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿ ಜೈಲಿನಲ್ಲಿರುವ ದೆಹಲಿ ಸಿಎಂ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

ದೆಹಲಿ ಮದ್ಯ ನೀತಿ ಹಗರಣಲ್ಲಿ ಜೈಲು ಸೇರಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ನ್ಯಾಯಾಲಯದಿಂದ 21 ದಿನಗಳ ಕಾಲ ಜಾಮೀನು ಮಂಜೂರು ಮಾಡಲಾಗಿದೆ. ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ಜಾಮೀನು ಕೇಳಿದ್ದ ಅರವಿಂದ ಕೇಜ್ರಿವಾಲ್ ಅವರಿಗೆ ಇದೊಂದು ಅಪರೂಪದ ಪ್ರಕರಣವೆಂದು ಪರುಗಣಿಸಿ ಜೂ.1ರವರೆಗೆ ಜಾಮೀನು ಮಂಜೂರು ಮಾಡಲಾಗಿದೆ. ಮಾ.21ಕ್ಕೆ ಅರವಿಂದ್ ಕೇಜ್ರಿವಾಲ್ ಅರೆಸ್ಟ್ ಆಗಿದ್ದು, ಏ.1ರಂದು ಜೈಲು ಸೇರಿದ್ದರು. ಈಗ ಚುನಾವಣೆ ಪ್ರಚಾರ ಕಾರ್ಯದ ಹಿನ್ನೆಲೆಯಲ್ಲಿ ಜೂ.1ರವರೆಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಯಾವುದೇ ಕಡತಕ್ಕೆ ಸಹಿ ಹಾಕುವಂತಿಲ್ಲ:

ಅರವಿಂದ್ ಕೇಜ್ರಿವಾಲ್ ಅವರು ಮಧ್ಯಂತರ ಜಾಮೀನಿನ ಮೇಲೆ ಹೊರಗೆ ಬಂದಿದ್ದರೂ ಮುಖ್ಯಮಂತ್ರಿಯಾಗಿ ಸ್ವತಂತ್ರವಾಗಿ ಅಧಿಕಾರ ನಡೆಸಲು ಅವಕಾಶ ನೀಡಿಲ್ಲ. ಮುಖ್ಯವಾಗಿ ನೀವು ಯಾವುದೇ ಸರ್ಕಾರದ ಕಡತಕ್ಕೆ ಸಹಿ ಹಾಕುವಂತಿಲ್ಲ ಎಂದು ಸುಪ್ರೀಂಕೋರ್ಟ್ ಷರತ್ತನ್ನು ವಿಧಿಸಿದೆ. ಈಗ ಮಧ್ಯಂತರ ಜಾಮೀನಿನ ಮೇಲೆ ಹೊರ ಬಂದಿದ್ದರೂ ಅವರು ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಾತ್ರ ಪಾಲ್ಗೊಳ್ಳಬಹುದು ಎಂದು ನ್ಯಾಯಾಲಯ ಅರವಿಂದ್ ಕೇಜ್ರಿವಾಲ್‌ಗೆ ಸೂಚಿಸಿದೆ.