ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಪೂರ್ವ ಮುಂಗಾರುಮಳೆ ಅಬ್ಬರಿಸುತ್ತಿದೆ. ಇಂದಿನಿಂದ ರಾಜ್ಯದ ಹಲವೆಡೆ 7 ದಿನಗಳ ಕಾಲ ಮಳೆಯಾಗಲಿದೆ. ಇಂದು ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರೀ ಮಳೆಯ ಸಾಧ್ಯತೆ ಹಿನ್ನೆಲೆ 5 ಜಿಲ್ಲೆಗಳಿಗೆ ಇಂದು ಹಾಗೂ ನಾಳೆ (ಮೆ 21, 22) ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಮುಂಜಾನೆಯಿಂದ ಮೋಡ ಕವಿದ ವಾತವರಣವಿದ್ದು, ಇಂದಿನಿಂದ ಎರಡು ದಿನಗಳ ಕಾಲ ಗಾಳಿ, ಗುಡುಗು ಮಿಂಚಿನಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಎಚ್ಚರಿಸಿದೆ.
ಮೇ 20ರಂದು ಬೆಂಗಳೂರಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿತ್ತು?
ಹೆಚ್.ಗೊಲ್ಲಹಳ್ಳಿ- 2 ಸೆಂ.ಮೀ
ರಾಜರಾಜೇಶ್ವರಿನಗರ- 2 ಸೆಂ.ಮೀ
ಹಮ್ಮಿಗೆಪುರ- 2 ಸೆಂ.ಮೀ
ಗೊಟ್ಟಿಗೆರೆ- 1.2 ಸೆಂ.ಮೀ