ಬೆಂಗಳೂರು, (ಮೇ 21): ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟವಾಗಿದೆ. 149824 ವಿಧ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು. ಆದ್ರೆ, ಪರೀಕ್ಷೆಗೆ ಹಾಜರಾಗಿದ್ದ 148942 ವಿದ್ಯಾರ್ಥಿಗಳ ಪೈಕಿ 52505 ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ 35.25% ಫಲಿತಾಂಶ ಬಂದಿದೆ. ಇನ್ನು ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶವನ್ನು ಇಲಾಖೆಯ ವೆಬ್‌ಸೈಟ್ karresults.nic.in ನಲ್ಲಿ ನೋಡಬಹುದಾಗಿದೆ.
ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಆದ್ರೆ, ಮೊದಲ ಹಂತದಲ್ಲಿ ಅನುತ್ತೀರ್ಣರಾಗಿ ಎರಡನೇ ಬಾರಿಗೆ ರಾಜ್ಯಾದ್ಯಂತ ಒಟ್ಟು 301 ಪರೀಕ್ಷಾ ಕೇಂದ್ರಗಳಲ್ಲಿ ಏಪ್ರಿಲ್ 29 ರಿಂದ ಮೇ 16ರವರೆಗೆ 2ನೇ ಪರೀಕ್ಷೆಗಳು ನಡೆಸಲಾಗಿತ್ತು. 7,875 ಮೌಲ್ಯಮಾಪಕರಿಂದ 28 ಕೇಂದ್ರಗಳಲ್ಲಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆದಿತ್ತು. ಪರೀಕ್ಷೆ 2ಕ್ಕೆ 1,49,824 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 1,48,942 ವಿದ್ಯಾರ್ಥಿಗಳು ಹಾಜರಾಗಿದ್ದು, 52,505 ವಿದ್ಯಾರ್ಥಿಗಳು ಪಾಸಾಗಿದ್ದಾರೆ. 35.25ರಷ್ಟು ಶೇಕಡವಾರು ಫಲಿತಾಂಶ ಬಂದಿದೆ.
ಇನ್ನೂ ಪರೀಕ್ಷೆ 1 ಮತ್ತು ಪರೀಕ್ಷೆ 2ರಲ್ಲಿ ವಿಷಯವಾರು ಗಳಿಸಿದ ಅತಿಹೆಚ್ಚು ಅಂಕಗಳನ್ನು ಪರಿಗಣಿಸಿ ಅಂತಿಮ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ. ಪಿಯುಸಿ ಪರೀಕ್ಷೆಗಳನ್ನು ಎದುರಿಸಿದ ಎಲ್ಲಾ ವಿದ್ಯಾರ್ಥಿಗಳು ರೋಲ್ ನಂಬರ್ ಆಧರಿಸಿ ತಮ್ಮ ಫಲಿತಾಂಶಗಳನ್ನು ಈ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು.
ರಿಸಲ್ಟ್ ಚೆಕ್ ಮಾಡುವುದೇಗೆ?
- karresults.nic.in ನಲ್ಲಿ ಕರ್ನಾಟಕ ಫಲಿತಾಂಶ ಪೋರ್ಟಲ್‌ಗೆ ಭೇಟಿ ನೀಡಿ.
- ಮುಖಪುಟದಲ್ಲಿ ನೀಡಲಾದ ಪಿಯುಸಿ 2 ಪರೀಕ್ಷೆಯ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಲಾಗಿನ್ ಪುಟದಲ್ಲಿ, ನಿಮ್ಮ KSEAB ನೋಂದಣಿ ಸಂಖ್ಯೆಯನ್ನು ಹಾಕಿ, ವಿಷಯ ಸಂಯೋಜನೆ ಅಥವಾ ಸ್ಟ್ರೀಮ್ ಅನ್ನು ಆಯ್ಕೆ ಮಾಡಿ (ವಿಜ್ಞಾನ/ಕಲೆ/ವಾಣಿಜ್ಯ)
- ಕ್ಲಿಕ್ ಮಾಡಿದಾಗ ನಿಮಗೆ ಫಲಿತಾಂಶವು ಸ್ಕ್ರೀನ್ ಮೇಲೆ ಕಾಣಿಸುತ್ತದೆ.
- ಬಳಿಕ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಿ.