ಮೈಸೂರು, ಮೇ 25 : ರೇಪ್‌ಗಿಂತ ವಿಡಿಯೊ ಹಂಚಿದ್ದು ದೊಡ್ಡ ಅಪರಾಧ ಅಂಥ ಯಾವ ಕಾನೂನುನಿಲ್ಲಿದೆ ಹೇಳಿ? ಕುಮಾರಸ್ವಾಮಿ ಏನಾದರೂ ಸೆಕ್ಷನ್ ಹೇಳಿದ್ದಾರಾ? ಅದು ಭಾರತೀಯ ದಂಡ ಸಂಹಿತೆಯಲ್ಲಿದೆಯಾ? ಅಥವಾ ಇವರೇ ಬರೆದುಕೊಂಡ ಕಾನೂನಿನಲ್ಲಿ ಇದೆಯಾ ಹೇಳಲಿ. ಹಾಗಂತ ನಾನು ವಿಡಿಯೊ ವಿತರಣೆಯನ್ನು ಸಮರ್ಥನೆ ಮಾಡುತ್ತಿಲ್ಲ . ಆದರೆ, ರೇಪ್‌ಗಿಂತ ವಿಡಿಯೊ ಹಂಚಿದು ಮಹಾ ಅಪರಾಧ ಎನ್ನುವುದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ನನ್ನ ಮಗ ರಾಕೇಶ್ ಸತ್ತು ಹೋಗಿ 8 ವರ್ಷ ಆಗಿದೆ. ಈಗ ಆ ವಿಚಾರವನ್ನು ಬೇರೆ ಯಾವುದಕ್ಕೋ ಲಿಂಕ್ ಮಾಡಿ ಮಾತನಾಡುವುದು ಮೂರ್ಖತನ. ಅವರ ಮಗ ರೇಪ್ ಮಾಡಿ ಓಡಿ ಹೋಗಿರುವುದು. ಅದಕ್ಕೂ 2016ರಲ್ಲಿ ಸತ್ತು ಹೋದ ರಾಕೇಶ್ ವಿಚಾರಕ್ಕೂ ಏನು ಸಂಬಂಧ? ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರನ್ನು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.
ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಸರ್ಕಾರದಿಂದ ತಡವಾಗಿ ಪತ್ರ ಬಂತು ಎಂಬ ಕೇಂದ್ರ ಸಚಿವ ಜೈಶಂಕರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಇದು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಅಷ್ಟೇ. ನಾನು 15 ದಿನಗಳ ಹಿಂದೆಯೇ ಪತ್ರ ಬರೆದಿದ್ದೇನೆ. ಪತ್ರ ಬರೆದರೂ ನನಗೆ ರಿಪ್ಲೈ ಬಂದಿಲ್ಲ. ಒಂದು ವೇಳೆ ನಾನು ಪತ್ರ ಬರೆದದ್ದು ತಡವೇ ಅಂದುಕೊಳ್ಳಿ, ಈಗ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಹೇಳಿ? ಸುಮ್ಮನೆ ಕಾಲ ಕಳೆಯುವುದನ್ನು ಬಿಡಬೇಕು ಎಂದು ಹೇಳಿದರು.
ರೇಪ್‌ಗಿಂತ ಅದರ ವಿಡಿಯೊನ ಹಂಚಿದ್ದು ದೊಡ್ಡ ಅಪರಾಧ ಎಂಬ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ರೇಪ್‌ಗಿಂತ ವಿಡಿಯೊ ಹಂಚಿದ್ದು ದೊಡ್ಡ ಅಪರಾಧ ಅಂಥ ಯಾವ ಕಾನೂನುನಿಲ್ಲಿದೆ ಹೇಳಿ? ಕುಮಾರಸ್ವಾಮಿ ಏನಾದರೂ ಸೆಕ್ಷನ್ ಹೇಳಿದ್ದಾರಾ? ಅದು ಭಾರತೀಯ ದಂಡ ಸಂಹಿತೆಯಲ್ಲಿದೆಯಾ? ಅಥವಾ ಇವರೇ ಬರೆದುಕೊಂಡ ಕಾನೂನಿನಲ್ಲಿ ಇದೆಯಾ ಹೇಳಲಿ. ಹಾಗಂತ ನಾನು ವಿಡಿಯೊ ವಿತರಣೆಯನ್ನು ಸಮರ್ಥನೆ ಮಾಡುತ್ತಿಲ್ಲ . ಆದರೆ, ರೇಪ್‌ಗಿಂತ ವಿಡಿಯೊ ಹಂಚಿದು ಮಹಾ ಅಪರಾಧ ಎನ್ನುವುದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.