ಬೆಂಗಳೂರು: ರಾಜ್ಯಾದ್ಯಂತ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಎಚ್ಚರಿಕೆಯನ್ನು ನೀಡಲಾಗಿದೆ.
ದಕ್ಷಿಣ ಒಳನಾಡಿನ ಚಿತ್ರದುರ್ಗ ಜಿಲ್ಲೆಯಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೆ, ಉಳಿದ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಮಲೆನಾಡಿನ ಕೊಡಗು ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗಲಿದ್ದು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರಿನಲ್ಲಿ ಹಗುರದಿಂದ ಕೂಡಿದ ಮಳೆಯಾಗಬಹುದು. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಧ್ಯಮ ಮಳೆಯಾಗಲಿದೆ.
ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ
ರಾಜಧಾನಿ ಬೆಂಗಳೂರಿನ ಸುತ್ತಮುತ್ತ ಮುಂಜಾನೆ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 22 ಡಿ.ಸೆ ಇರಲಿದೆ.
ಕರಾವಳಿಗೆ ಯೆಲ್ಲೋ ಅಲರ್ಟ್
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಭಾರಿ ಮಳೆಯೊಂದಿಗೆ ಗುಡುಗು ಸಹಿತ ಮಿಂಚಿನೊಂದಿಗೆ ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ. ಹೀ