ಮೂಡಿಗೆರೆ: ಮಲೆನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಮೂಡಿಗೆರೆ ತಾಲೂಕಿನ ಬಾಳೂರು ವ್ಯಾಪ್ತಿಯ ಕೆ. ತಲಗೂರಿನಲ್ಲಿ ಮನೆ ಮೇಲೆ ಬೃಹತಾಕಾರದ ಮರವೊಂದು ಬಿದ್ದಿದೆ. ಘಟನೆಯಲ್ಲಿ ಮನೆಯಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ.
ರಾತ್ರಿ ಸುಮಾರು 10.00 ಗಂಟೆ ಸಮಯದಲ್ಲಿ ಕೆ. ತಲಗೂರು ಗ್ರಾಮದ ಚಂದ್ರಮ್ಮ ಮನೆಯಲ್ಲಿ ಚಂದ್ರಮ್ಮ, ಸರಿತಾ ಹಾಗೂ ಸರಿತಾ ಮಕ್ಕಳಾದ ಸುನೀಲ್, ದೀಕ್ಷಿತ್ ಮಲಗಿದ್ದಾಗ ಮನೆಯ ಪಕ್ಕದಲ್ಲಿ ಇದ್ದ ಬೃಹದಾಕಾರದ ಮರ ಮುರಿದು ಬಿದ್ದಿದೆ. ಸರಿತಾ ಸ್ಥಳದಲ್ಲೇ ಮೃತಪಟ್ಟಿದ್ದು, ಚಂದ್ರಮ್ಮ ಆಸ್ಪತ್ರೆಗೆ ಸಾಗುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.