ಮನೆ ಗೋಡೆ ಕುಸಿದು ಸಾವಿರಾರು ರೂಪಾಯಿ ಮೌಲ್ಯದ ವಸ್ತುಗಳು ಹಾನಿ

ಶಿರಸಿ: ಮಳೆಯಿಂದಾಗಿ ತಾಲೂಕಿನ ಬದನಗೋಡ ವ್ಯಾಪ್ತಿಯ ಹೊಸಕೊಪ್ಪದಲ್ಲಿ ಮನೆ ಗೋಡೆ ಕುಸಿತವಾಗಿದೆ.
ಈ ವೇಳೆ ಮನೆಯಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೋಡೆ ಕುಸಿದ ಪರಿಣಾಮ ಮನೆಯಲ್ಲಿದ್ದ ಪಾತ್ರೆ, ಬಟ್ಟೆ, ಗ್ಯಾಸ್ ಸೇರಿ ಸಾವಿರಾರು ರೂಪಾಯಿ ಮೌಲ್ಯದ ವಸ್ತುಗಳಿಗೆ ಹಾನಿಯಾಗಿದೆ.