ಯಲ್ಲಾಪುರ: ಹರ್ ಘರ್ ತಿರಂಗಾ ಅಭಿಯಾನದ ಕುರಿತು ಬಿಜೆಪಿ ಮಂಡಲದ ವತಿಯಿಂದ ಪಟ್ಟಣದಲ್ಲಿ ಜಾಗೃತಿ ಜಾಥಾ ನಡೆಯಿತು. ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಬಿಜೆಪಿ ಕಚೇರಿಯ ಬಳಿ ಜಾಥಾಕ್ಕೆ ಚಾಲನೆ ನೀಡಿದರು.
ಪಟ್ಟಣದ ವಿವಿಧೆಡೆ ಸಂಚರಿಸಿ, ಅಭಿಯಾನದ ಕುರಿತು ಜಾಗೃತಿ ಮೂಡಿಸಲಾಯಿತು. ಬಸ್‌ನಿಲ್ದಾಣದ ಬಳಿಯ ಆಟೋ ನಿಲ್ದಾಣದ ಆಟೋ ಚಾಲಕರಿಗೆ ಧ್ವಜ ವಿತರಿಸಿ ಮಾತನಾಡಿದ ಸಚಿವ ಶಿವರಾಮ ಹೆಬ್ಬಾರ್, ಎಲ್ಲರೂ ಮನೆಯಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಪ್ರಧಾನಿ ಮೋದಿ ಕರೆ ನೀಡಿದ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸೋಣ ಎಂದು ಹೇಳಿದರು.
ಈ ವೇಳೆ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ, ಬಿಜೆಪಿ ತಾಲೂಕು ಅಧ್ಯಕ್ಷ ಗೋಪಾಲಕೃಷ್ಣ ಗಾಂವ್ಕಾರ, ಡಾ.ರವಿ ಭಟ್ಟ ಬರಗದ್ದೆ, ಪ್ರಸಾದ ಹೆಗಡೆ, ಗುರುಪ್ರಸಾದ ಹೆಗಡೆ ಹಾಗೂ ಇತರರು ಭಾಗಿಯಾಗಿದ್ದರು.