ಕರ್ನಾಟಕದಲ್ಲಿ ಮೋದಿ ಅಲೆಯೋ ಅಥವಾ ಕಾಂಗ್ರೆಸ್ ಗ್ಯಾರಂಟೀಯೋ ಎನ್ನುವ ಪ್ರಶ್ನೆಗೆ ಮತದಾನೋತ್ತರ ಸಮೀಕ್ಷೆಯಲ್ಲಿ ಉತ್ತರ ಲಭಿಸಿದೆ. ಕಳೆದ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶವನ್ನು ಪುನರಾವರ್ತಿಸುವ ಆಸೆಯನ್ನು ಹೊಂದಿದ್ದ ಬಿಜೆಪಿಗೆ ಈ ಬಾರಿ ಹಿನ್ನಡೆ ಆಗಿದೆ.
ಪೀಪಲ್ ಇನ್‌ಸೈಟ್ಸ್, ಪೋಲ್‌ಸ್ಟಾರ್ಟ್‌ನಲ್ಲಿ ಕರ್ನಾಟಕದಲ್ಲಿ ಬಿಜೆಪಿ ಗೆಲ್ಲಬಹುದಾದ ಸ್ಥಾನಗಳ ಬಗ್ಗೆ ಭವಿಷ್ಯ ನುಡಿಸಿದೆ. ಈ ಬಾರಿ ಬಿಜೆಪಿ ಸಿಂಗಲ್ ಲಾರ್ಜೆಸ್ಟ್ ಪಾರ್ಟಿ ಆಗುವುದರಲ್ಲಿ ಯಾವುದೇ ಸಂದೇಹವಿಲ್ಲ. ಆದರೆ ಕಳೆದ ಬಾರಿಯ ಫಲಿತಾಂಶವನ್ನು ಮತ್ತೊಮ್ಮೆ ಮುಟ್ಟುವ ಕಮಲ ಪಡೆಯ ಆಸೆ ಕಮರಿದೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳಲ್ಲಿ 25 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ ಈ ಬಾರಿ 18 ಸ್ಥಾನಗಳಿಗೆ ಕುಸಿದಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಕೇವಲ 1 ಸ್ಥಾನಕ್ಕೆ ಸೀಮಿತವಾಗಿದ್ದ ಕಾಂಗ್ರೆಸ್ ಈ ಬಾರಿ ಏಳು ಸ್ಥಾನ ಏರಿಕೆ ಕಂಡಿದ್ದು, 8 ಸ್ಥಾನಕ್ಕೆ ಮುಟ್ಟಲಿದೆ. ಜೆಡಿಎಸ್ 2 ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ ಎಂದು ಪೀಪಲ್ ಇನ್‌ಸೈಟ್ಸ್, ಪೋಲ್‌ಸ್ಟಾರ್ಟ್ ತಿಳಿಸಿದೆ..
ಕಳೆದ ಬಾರಿ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಬಿಜೆಪಿ, ಇದನ್ನೆ ಮುಂದುವರೆಸುವ ಲೆಕ್ಕಾಚಾರವನ್ನು ಕಮಲ ಪಡೆ ಹಾಕಿಕೊಂಡಿತ್ತು. ಕಳೆದ ಬಾರಿಯ ಫಲಿತಾಂಶವನ್ನೇ ಪುನಾರ್ವತಿಸಲು ಬಿಜೆಪಿ ಪ್ಲ್ಯಾನ್ ಮಾಡಿಕೊಂಡಿದ್ದು ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ಕಳೆದ ಬಾರಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಸೇರಿಕೊಂಡು ಲೋಕಸಭಾ ಚುನಾವಣೆಯನ್ನು ಎದುರಿಸಿದ್ದವು, ಈ ಬಾರಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಲೋಕ ಕಣಕ್ಕೆ ದುಮುಕಿವೆ.
ಬಹುನಿರೀಕ್ಷಿತ ಲೋಕಸಭಾ ಚುನಾವಣೆಗಳು ಮುಗಿದಿವೆ. ದೇಶದಲ್ಲಿ ಏಳು ಹಂತದಲ್ಲಿ ಚುನಾವಣೆಗಳು ನಡೆದಿವೆ. ಜೂನ್ 1 ದೇಶದಲ್ಲಿ ಕೊನೆಯ ಹಂತದ ಮತದಾನ ನಡೆದಿದೆ. ಜೂನ್ 4 ಕ್ಕೆ ಚುನಾವಣಾ ಫಲಿತಾಂಶ ಹೊರ ಬೀಳಲಿದೆ. ಇದಕ್ಕೂ ಪೂರ್ವದಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಹೊರ ಬಿಳಲು ಕ್ಷಣಗಣನೆ ಆರಂಭವಾಗಿದೆ.