ಮನೆಯ ಗೋಡೆ ಕುಸಿತ

ಯಲ್ಲಾಪುರ: ತಾಲೂಕಿನಲ್ಲಿ ಜೋರಾದ ಮಳೆಯ ಪರಿಣಾಮ ಇಡಗುಂದಿ ಗ್ರಾ.ಪಂ ವ್ಯಾಪ್ತಿಯ ಗುಳ್ಳಾಪುರದಲ್ಲಿ ಮನೆಯ ಗೋಡೆ ಕುಸಿದು ಹಾನಿಯಾಗಿದೆ.
ಕಮಲಾ ಚಿದಂಬರ ಸಿದ್ದಿ ಎಂಬವರಿಗೆ ಸೇರಿದ ಮನೆ ಇದಾಗಿದ್ದು, ಮನೆಯಲ್ಲಿದ್ದ ಯಾರಿಗೂ ಅಪಾಯ ಉಂಟಾಗಿಲ್ಲ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಹಾನಿ ಅಂದಾಜಿಸಿದ್ದಾರೆ.