ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಕೇದರ್ ಜಾಧವ್

ಟೀಮ್ ಇಂಡಿಯಾ ಆಟಗಾರ ಕೇದರ್ ಜಾಧವ್ ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. 2014 ರಲ್ಲಿ ಭಾರತ ಪರ ಪಾದಾರ್ಪಣೆ ಮಾಡಿದ ಜಾಧವ್ 2020 ರಲ್ಲಿ ಕೊನೆಯ ಬಾರಿ ಬ್ಲೂ ಜೆರ್ಸಿಯಲ್ಲಿ ಕಾಣಿಸಿಕೊಂಡಿದ್ದರು. ನ್ಯೂಝಿಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಜಾಧವ್ ಇದಾದ ಬಳಿಕ ಟೀಮ್ ಇಂಡಿಯಾದಿಂದ ಹೊರಬಿದ್ದಿದ್ದರು.

ಆ ಬಳಿಕ ಹಲವು ಬಾರಿ ಕಂಬ್ಯಾಕ್ ಮಾಡಲು ಯತ್ನಿಸಿದರೂ ಸಫಲರಾಗಲಿಲ್ಲ. ಇದೀಗ 10 ವರ್ಷಗಳ ತಮ್ಮ ಅಂತಾರಾಷ್ಟ್ರೀಯ ಕೆರಿಯರ್ ವಿದಾಯ ಹೇಳಲು ನಿರ್ಧರಿಸಿದ್ದಾರೆ. ಅಲ್ಲದೆ ಈ ವಿದಾಯದೊಂದಿಗೆ ಐಪಿಎಲ್ ಹಾಗೂ ದೇಶೀಯ ಕ್ರಿಕೆಟ್​ಗೂ ಕೇದರ್ ಜಾಧವ್ ನಿವೃತ್ತಿ ಘೋಷಿಸಿದ್ದಾರೆ.