ಕಾರವಾರ ಜೂನ್ 04 : ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಾರವಾರ ನಗರ ಮಂಡಲ ಹಾಗೂ ಗ್ರಾಮೀಣ ಮಂಡಲದ ವತಿಯಿಂದ ಸವಿತಾ ಸರ್ಕಲ್ನಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದ್ರು. ಕಾಗೇರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನಗರಾಧ್ಯಕ್ಷ ನಾಗೇಶ್ ಕುರುಡೇಕರ್ ಹಾಗೂ ವಿ.ಎಂ ಹೆಗಡೆ ಮಾತನಾಡಿ ಸಂತೋಷವನ್ನು ಹಂಚಿಕೊಂಡರು.
ಈ ವೇಳೆ ಕಾರವಾರ ನಗರ ಪ್ರಭಾರಿ ರಾಜು ಭಂಡಾರಿ, ಮಾಧ್ಯಮ ಸಹ ಸಂಚಾಲಕ ಕಿಶನ್ ಕಾಂಬ್ಳೆ, ನಗರ ಬಿಜೆಪಿ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮಹಾಶಕ್ತಿ ಕೇಂದ್ರದವರು, ನಗರಸಭೆ ಸದಸ್ಯರು, ಎಲ್ಲಾ ಮೋರ್ಚಾ ದವರು, ಗ್ರಾಮೀಣ ಪ್ರಧಾನ ಕಾರ್ಯದರ್ಶಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು, ಬಿಜೆಪಿಯ ಪದಾಧಿಕಾರಿಗಳು, ಹಾಗೂ ಕಾರ್ಯಕರ್ತರು ಭಾಗಿಯಾಗಿದ್ರು..