ಪ್ರಧಾನಿ ಸ್ಥಾನಕ್ಕೆ ನರೇಂದ್ರ ಮೋದಿ ರಾಜೀನಾಮೆ

ದೆಹಲಿ ಜೂ.5: ಪ್ರಧಾನಿ ನರೇಂದ್ರ ಮೋದಿ ಅವರು ಇಂದು 17ನೇ ಲೋಕಸಭೆ ವಿಸರ್ಜನೆಗೆ ಶಿಫಾರಸು ಮಾಡಲು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ. ಇದೀಗ ಮೋದಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುಂದಿನ ಹೊಸ ಸರ್ಕಾರ ರಚನೆ ಆಗುವವರೆಗೆ ನೀವು ಮತ್ತು ನಿಮ್ಮ ಸಚಿವ ಸಂಪುಟ ಮುಂದುವರಿಯುವಂತೆ ಮನವಿ ಮಾಡಿದ್ದಾರೆ.

2024ರ ಚುನಾವಣೆಯೂ 2014 ರಿಂದ 2019 ರವರೆಗೆ ನಡೆದ 17 ನೇ ಲೋಕಸಭೆಯ ವಿಸರ್ಜನೆಗೆ ದಾರಿ ಮಾಡಿಕೊಡಲಿದೆ. ರಾಷ್ಟ್ರ ರಾಜಧಾನಿಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯ ನಂತರ ಈ ಬೆಳವಣಿಗೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯು ಜೂನ್ 16 ಕ್ಕೆ ಅಂತ್ಯಗೊಳ್ಳುವ ಸಂಪುಟವನ್ನು ವಿಸರ್ಜಿಸಲು ಶಿಫಾರಸು ಮಾಡಿದೆ. ಇದರ ಜತೆಗೆ ಗೃಹ ಸಚಿವ ಅಮಿತ್​​​​​ ಇಂದು ಎಲ್ಲರೂ ಎನ್​​ಡಿಎ ಸಭೆಗೆ ಬರುವಂತೆ ಆಹ್ವಾನ ನೀಡಿದ್ದಾರೆ.

ಮೂಲಗಳ ಪ್ರಕಾರ, ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಜನತಾ ದಳ-ಯುನೈಟೆಡ್ (ಜೆಡಿಯು) ಇದೀಗ ಕಿಂಗ್​​ಮೇಕರ್‌ ಆಗಿದ್ದು, ಸರ್ಕಾರ ರಚನೆ ಮಾಡಲು ಅವರ ಬೆಂಬಲ ಅಗತ್ಯವಾಗಿದೆ. ಇದೀಗ ಮೋದಿ ಅವರು ಸರ್ಕಾರ ರಚನೆ ಮಾಡಲು ಅವರ ಬೆಂಬಲ ಸಿಕ್ಕಿದೆ. ಇನ್ನು 3ನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಜೂ.8ಕ್ಕೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇಂದು ನಡೆಯಲಿರುವ ಎನ್‌ಡಿಎ ಸಭೆಯಲ್ಲಿ ಎರಡೂ ಪಕ್ಷಗಳು ಬಿಜೆಪಿಗೆ ಅಧಿಕೃತ ಬೆಂಬಲ ಪತ್ರವನ್ನು ಸಲ್ಲಿಸುವ ನಿರೀಕ್ಷೆಯಿದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಎನ್​​ಡಿಎ ಒಕ್ಕೂಟದ ಹೊಸದಾಗಿ ಆಯ್ಕೆಯಾದ ಸಂಸದರ ಸಭೆ ಜೂನ್ 7 ರಂದು ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿದೆ ಎಂದು ಹೇಳಲಾಗಿದೆ. ಈ ಸಭೆಯಲ್ಲಿ ಎನ್‌ಡಿಎ ಸರ್ಕಾರ ರಚನೆ ಕುರಿತು ಚರ್ಚೆ ನಡೆಯಲಿದೆ.