ಶಾಸಕ ಸ್ಥಾನಕ್ಕೆ ಪ್ರದೀಪ್ ಈಶ್ವರ್ ರಾಜೀನಾಮೆ ನೀಡಿದ್ರಾ? ರಾಜೀನಾಮೆ ಪತ್ರ ವೈರಲ್!

ಬೆಂಗಳೂರು/ಚಿಕ್ಕಬಳ್ಳಾಪುರ, (ಜೂನ್.5): ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಲ್ಲಿ ಡಾ. ಕೆ.ಸುಧಾಕರ್ ಕಾಂಗ್ರೆಸ್‌ ಅಭ್ಯರ್ಥಿ ಎಂ.ಎಸ್.ರಕ್ಷಾರಾಮಯ್ಯ ವಿರುದ್ದ 1,62,099 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತಮ್ಮ ಸ್ಥಾನಕ್ಕೆ ಯಾವಾಗ ರಾಜೀನಾಮೆ ನೀಡುತ್ತಾರೆ ಎಂಬ ಚರ್ಚೆಗಳು ಜೋರಾಗಿಯೇ ಇದೆ.

ವೈರಲ್‌ ಆದ ಪ್ರದೀಪ್‌ ಈಶ್ವರ್ ರಾಜೀನಾಮೆ ಪತ್ರ

ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ಟ್ರೋಲ್ ಆಗುತ್ತಿದ್ದಾರೆ. ಇದರ ಮಧ್ಯೆ ಪ್ರದೀಪ್​ ಈಶ್ವರ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಕಾರಣ ಅವರ ರಾಜೀನಾಮೆ ಪತ್ರವೊಂದು ಸಿಕ್ಕಾಪಟ್ಟೆ ವೈರಲ್ ಆಗಿದೆ.