ಹೊನ್ನಾವರ ಜೂನ್ 05 : ತಾಲೂಕಿನ ಹೊಳೆಗದ್ದೆ ಟ್ರೋಲ್ ಬಳಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಅರಣ್ಯ ಇಲಾಖೆ ಜಂಟಿ ಆಶ್ರಯದಲ್ಲಿ ಸಸಿ ನಡೆವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯ್ತು. ಈ ವೇಳೆ ಅರಣ್ಯ ಇಲಾಖೆ ಹಾಗೂ ಐಆರ್‌ಬಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಸಿ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು..
ಪ್ರತಿ ವರ್ಷ ಜೂನ್ 5 ರಂದು ವಿಶ್ವಾದ್ಯಂತ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಪರಿಸರ ದಿನವನ್ನು ವಿಶ್ವಾದ್ಯಂತ ಪರಿಸರದ ಬಗ್ಗೆ ಜಾಗೃತಿ ಮತ್ತು ನಮ್ಮ ಪರಿಸರದ ರಕ್ಷಣೆಗೆ ಉತ್ತೇಜಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಜೀವಿಗಳ ಪೋಷಣೆಯಲ್ಲಿ ಪರಿಸರ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪರಿಸರದ ಸಮೃದ್ಧಿ ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಪ್ರತಿಯೊಂದು ಜೀವಿಯ ಜೀವನದ ಅಸ್ತಿತ್ವಕ್ಕೆ ಕಾರಣವಾಗಿದೆ.
ಪ್ರತಿ ವರ್ಷ ಬೇರೆ ಬೇರೆ ಘೋಷ ವಾಕ್ಯದೊಂದಿಗೆ ಪರಿಸರ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಪರಿಸರ ದಿನವು ಸಾರ್ವಜನಿಕವಾಗಿ ತಲುಪಲು ಜಾಗತಿಕ ವೇದಿಕೆಯಾಗಿ ಬೆಳೆದಿದೆ. ಪ್ರತಿವರ್ಷ 143ಕ್ಕೂ ಹೆಚ್ಚು ದೇಶಗಳು ಈ ದಿನದಲ್ಲಿ ಭಾಗಿಯಾಗುತ್ತವೆ. ಪ್ರಮುಖ ಸಂಸ್ಥೆಗಳು, ಎನ್ಜಿಒಗಳು, ಸಮುದಾಯಗಳು, ಸರ್ಕಾರಗಳು ವಿಶ್ವಾದ್ಯಂತ ಪರಿಸರ ದಿನವನ್ನು ವಿವಿಧ ರೀತಿಯಲ್ಲಿ ಆಚರಿಸುತ್ತವೆ. ಪ್ರಧಾನಿ ನರೇಂದ್ರ ಮೋದಿಯವರು ಪರಿಸರ ದಿನದ ಅಂಗವಾಗಿ ಗಿಡ ನೆಡುವಂತೆ ದೇಶದ ನಿವಾಸಿಗಳಿಗೆ ಕರೆ ಕೊಟ್ಟಿದ್ದಾರೆ. ಭವಿಷ್ಯದ ಪೀಳಿಗೆಗೆ ಇದರ ಅವಶ್ಯಕತೆ ಇರುವ ಹಿನ್ನೆಲೆಯಲ್ಲಿ ಗಿಡ ನೆಡುವಂತೆ ಅವರು ತಿಳಿಸಿದ್ದಾರೆ. ಅವರ ಕರೆಗೆ ಓಗೊಟ್ಟು ಇದಾಗಲೇ ಲಕ್ಷಾಂತರ ಮಂದಿ ಗಿಡ ನೆಡುವ ಕಾರ್ಯದಲ್ಲಿ ತೊಡಗಿದ್ದಾರೆ.
ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ರಾಷ್ಟ್ರೀಯ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ರು…