T20 World Cup 2024: ಟಿ20 ವಿಶ್ವಕಪ್‌ನ ತನ್ನ ಮೊದಲ ಪಂದ್ಯದಲ್ಲಿ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿ ಟೀಮ್ ಇಂಡಿಯಾ ಶುಭಾರಂಭ ಮಾಡಿದೆ. ಈ ಗೆಲುವಿನೊಂದಿಗೆ ಭಾರತ ತಂಡವು ಗ್ರೂಪ್-ಎ ಪಾಯಿಂಟ್ಸ್ ಟೇಬಲ್ನಲ್ಲಿ ಅಗ್ರಸ್ಥಾನ ಅಲಂಕರಿಸಿದೆ. ಇನ್ನು ಭಾನುವಾರ ನಡೆಯಲಿರುವ ತನ್ನ 2ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ತಂಡವನ್ನು ಎದುರಿಸಲಿದೆ.
T20 World Cup 2024: ಟಿ-ಟ್ವೆಂಟಿ ವಿಶ್ವಕಪ್‌ನ 9ನೇ ಆವೃತ್ತಿಯಲ್ಲಿ ಟೀಮ್ ಇಂಡಿಯಾ ಶುಭಾರಂಭ ಮಾಡಿದೆ. ನ್ಯೂಯಾರ್ಕ್ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡವು ಐರ್ಲೆಂಡ್ ವಿರುದ್ಧ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡವು 16 ಓವರ್ಗಳಲ್ಲಿ 96 ರನ್ಗಳಿಸಿ ಆಲೌಟ್ ಆಗಿತ್ತು.
97 ರನ್ಗಳ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ (52) ಅರ್ಧಶತಕ ಬಾರಿಸಿ ಮಿಂಚಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಷಭ್ ಪಂತ್ ಅಜೇಯ 36 ರನ್ ಬಾರಿಸಿದರು. ಈ ಮೂಲಕ ಭಾರತ ತಂಡ 12.2 ಓವರ್ಗಳಲ್ಲಿ ಗುರಿ ತಲುಪಿ 8 ವಿಕೆಟ್ಗಳ ಗೆಲುವು ದಾಖಲಿಸಿದೆ.
ಟೀಮ್ ಇಂಡಿಯಾದ ಮುಂದಿನ ಪಂದ್ಯ ಯಾವಾಗ?
ಭಾರತ ತಂಡವು ತನ್ನ ಮುಂದಿನ ಪಂದ್ಯವನ್ನು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ವಿರುದ್ಧ ಆಡಲಿದೆ. ಜೂನ್ 9 ರಂದು ನ್ಯೂಯಾರ್ಕ್ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಶುರುವಾಗಲಿದೆ.
ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದಾಗಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಸೂಪರ್-8 ಹಂತಕ್ಕೇರುವುದನ್ನು ಬಹುತೇಕ ಖಚಿತಪಡಿಸಿಕೊಳ್ಳಲಿದೆ. ಹೀಗಾಗಿ ಉಭಯ ತಂಡಗಳಿಂದ ಈ ಪಂದ್ಯದಲ್ಲಿ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.
ಇಂಡೊ-ಪಾಕ್ ತಂಡಗಳು:
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.
ಮೀಸಲು ಆಟಗಾರರು: ಶುಭ್ಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.
ಪಾಕಿಸ್ತಾನ್ ತಂಡ: ಬಾಬರ್ ಆಝಂ (ನಾಯಕ), ಅಬ್ರಾರ್ ಅಹ್ಮದ್, ಆಝಂ ಖಾನ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಂ, ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ಅಮೀರ್, ಮೊಹಮ್ಮದ್ ರಿಝ್ವಾನ್, ನಸೀಮ್ ಶಾ, ಸೈಮ್ ಅಯೂಬ್, ಶಾದಾಬ್ ಖಾನ್, ಶಾಹೀನ್ ಶಾ ಅಫ್ರಿದಿ, ಉಸ್ಮಾನ್ ಖಾನ್.
ಟೀಮ್ ಇಂಡಿಯಾದ ವೇಳಾಪಟ್ಟಿ ಇಲ್ಲಿದೆ:
ದಿನಾಂಕ | ಪಂದ್ಯಗಳು | ಸಮಯ (IST) | ಸ್ಥಳ |
05-ಜೂನ್-24 | ಭಾರತ vs ಐರ್ಲೆಂಡ್ | 8:00 PM | ನ್ಯೂಯಾರ್ಕ್ |
09-ಜೂನ್-24 | ಭಾರತ vs ಪಾಕಿಸ್ತಾನ್ | 8:00 PM | ನ್ಯೂಯಾರ್ಕ್ |
12-ಜೂನ್-24 | ಭಾರತ vs ಯುಎಸ್ಎ | 8:00 PM | ನ್ಯೂಯಾರ್ಕ್ |
15-ಜೂನ್-24 | ಭಾರತ vs ಕೆನಡಾ | 8:00 PM | ಫ್ಲೋರಿಡಾ |