ನವದೆಹಲಿ ಜೂನ್ 06 : ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಸ್ಪಷ್ಟ ಬಹುಮತದ ಮೂಲಕ ಎನ್‌ಡಿಎ ಕೇಂದ್ರದಲ್ಲಿ ಮತ್ತೊಮ್ಮೆ ಸರ್ಕಾರ ರಚಿಸಲಿದೆ. ಇನ್ನು ನರೇಂದ್ರ ಮೋದಿ ಶನಿವಾರ ಪ್ರಮಾಣ ವಚನ ಸ್ವೀಕರಿಸುವುದು ಖಚಿತವಾಗಿದೆ. ಅಧಿಕೃತ ಮೂಲಗಳ ಪ್ರಧಾನಿ ನರೇಂದ್ರ ಮೋದಿ ಜೂ.8ರಂದು ಸಂಜೆ 8 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಜೂನ್ 8 ರಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎನ್ನಲಾಗುತ್ತಿದೆ. ಸತತ ಮೂರನೇ ಬಾರಿಗೆ ಚುನಾವಣೆಯಲ್ಲಿ ಗೆದ್ದು ದೇಶದ ಪ್ರಧಾನಿಯಾದ ದೇಶದ ಎರಡನೇ ನಾಯಕ ಎಂಬ ಹೆಗ್ಗಳಿಕೆಗೆ ಮೋದಿ ಈ ಬಾರಿ ಪಾತ್ರರಾಗಲಿದ್ದು, ಜೂನ್ 8ರಂದು ರಾತ್ರಿ 8 ಗಂಟೆಗೆ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಜ್ಯೋತಿಷ್ಯದ ಪ್ರಕಾರ 8 ಸಂಖ್ಯೆ ರಾಜಯೋಗದ ಸಂಕೇತವಾಗಿದೆ. ವೈದಿಕ ಜ್ಯೋತಿಷ್ಯದಲ್ಲಿ ಮಂಗಳಕರ ಯೋಗವಾಗಿದೆ. ಅಂದರೆ ರಾಜಮನೆತನದ ಶುಭ ಕಾರ್ಯ, ರಾಜಮನೆತನದ ಅಧಿಕಾರ ಪದಗ್ರಹಣ ಸೇರಿದಂತೆ ಮಹತ್ವದ ಹಾಗೂ ಶುಭ ಕಾರ್ಯಗಳಿಗೆ ಉತ್ತಮ ದಿನವಾಗಿದೆ. ಜೊತೆಗೆ ಶುಭ ಶುಕ್ರವಾರವಾಗಿದೆ. ಇನ್ನು 8 ಸಂಖ್ಯೆ ಶನಿ ಗ್ರಹವನ್ನು ಸೂಚಿಸುತ್ತದೆ. ಇನ್ನು ಎಂಟು ಸಂಖ್ಯೆ ಅಂದರೆ ವಿಶೇಷವಾಗಿದ್ದು, ಶನಿ ಗ್ರಹವನ್ನು ಸೂಚಿಸುತ್ತದೆ. ಶನಿ ಉತ್ಕೃಷ್ಠತೆಯಲ್ಲಿದೆ. ಹೀಗಾಗಿ ಯಶಸ್ಸು ಅತ್ಯಂತ ಉನ್ನತ ಮಟ್ಟದಲ್ಲಿರುತ್ತದೆ. ಜೊತೆಗೆ ಎಲ್ಲಾ ಶತ್ರುಗಳನ್ನು ಸೋಲಿಸುವ ಸಾಮರ್ಥ್ಯವಿದೆ. ಸಂಖ್ಯಾಶಾಸ್ತ್ರದ ಪ್ರಕಾರ 8 ನ್ಯಾಯದ ಸಂಕೇತವಾಗಿದೆ. ಇನ್ನು ನಾವು ಮೋದಿಯವರ ಇದುವರೆಗಿನ ನಡೆಗಳನ್ನ ಗಮನಿಸಿದರೆ ಅವರು ತಮ್ಮ ಜೀವನದ ಮುಖ್ಯ ಕೆಲಸಗಳನ್ನ ಮಾಡುವಾಗ ಬಹಳ ಶುಭ ದಿನಗಳನ್ನ ಆಯ್ಕೆ ಮಾಡಿದ್ದಾರೆ.
ಗಣ್ಯರ ಉಪಸ್ಥಿತಿ
ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿ ಚುನಾಯಿತರಾಗುತ್ತಿದ್ದಂತೆ ದೇಶ ವಿದೇಶಗಳ ಗಣ್ಯರಿಂದ ಶುಭಾಶಯಗಳ ಮಹಾಪೂರ ಹರಿದುಬಂದಿತ್ತು. ಹೀಗಾಗಿ ಅವರು ಇದೀಗ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮದಲ್ಲಿ ದಕ್ಷಿಣ ಏಷ್ಯಾದ ಪ್ರಮುಖ ನಾಯಕರು ಉಪಸ್ಥಿತರಿರಲಿದ್ದಾರೆ. ಬಾಂಗ್ಲಾದೇಶ ಮತ್ತು ಶ್ರೀಲಂಕಾ ನಾಯಕರು ಶನಿವಾರದ ಕಾರ್ಯಕ್ರಮದಲ್ಲಿ ತಮ್ಮ ಉಪಸ್ಥಿತಿಯನ್ನು ಈಗಾಗಲೇ ಪ್ರಧಾನಿ ಮೋದಿಯೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ನಂತರ ದೃಢಪಡಿಸಿದ್ದಾರೆ.
ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರ ಕಚೇರಿಯ ಮಾಧ್ಯಮ ವಿಭಾಗವು ಶನಿವಾರದ ಕಾರ್ಯಕ್ರಮಕ್ಕೆ ಹಾಜರಾಗಲು ಅವರು ಆಹ್ವಾನವನ್ನು ಸ್ವೀಕರಿಸಿದ್ದಾರೆ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಪ್ರಧಾನಿ ಮೋದಿಯವರನ್ನು ಅಭಿನಂದಿಸಿದ ಮೊದಲ ವಿದೇಶಿ ನಾಯಕರಲ್ಲಿ ಒಬ್ಬರು, ಬಾಂಗ್ಲಾದೇಶ ಮಾಧ್ಯಮಗಳ ಪ್ರಕಾರ, ಕಾರ್ಯಕ್ರಮಕ್ಕೆ ಒಂದು ದಿನ ಮುಂಚಿತವಾಗಿ ಅವರು ಶುಕ್ರವಾರ ದೆಹಲಿಗೆ ಆಗಮಿಸುತ್ತಾರೆ.
ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಾಲ್ ಪ್ರಚಂಡ ಭೂತಾನ್ ಪ್ರಧಾನಿ ಟ್ಶೆರಿಂಗ್ ಟೋಬ್ಗೇ ಮತ್ತು ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನಾಥ್ ಅವರಿಗೆ ಔಪಚಾರಿಕ ಆಹ್ವಾನಗಳನ್ನು ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.