ಕಾರವಾರ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಭಾರತೀಯ ಜನತಾ ಪಾರ್ಟಿಯ ಯುವಮೋರ್ಚಾ ವತಿಯಿಂದ ಕಾರವಾರದಲ್ಲಿ ಬೃಹತ್ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿದೆ.
ನಾಳೆ (ಆಗಸ್ಟ್ 11) ರಂದು ಮದ್ಯಾಹ್ನ 3 ಗಂಟೆಗೆ ಮಿತ್ರ ಸಮಾಜದಿಂದ ಜಾಥಾ ಪ್ರಾರಂಭವಾಗಲಿದೆ. ಕಾರವಾರ ನಗರ ಹಾಗೂ ಗ್ರಾಮೀಣ ಮಂಡಲ ಕಾರ್ಯಕರ್ತರು ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ದೇಶಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದು ಜಾಥಾವನ್ನು ಯಶಸ್ವಿಗೊಳಿಸಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ.