ರಾಶಿ ಭವಿಷ್ಯ ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಶನಿವಾರ (ಜೂನ್. 15) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ವೃಷಭ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠಾ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಉತ್ತರಾಫಲ್ಗುಣೀ, ಯೋಗ: ಸಿದ್ಧಿ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 05 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 01 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:19 ರಿಂದ 10:56ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:10 ರಿಂದ 03:47ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:05 ರಿಂದ 07:42ರ ವರೆಗೆ.
ಧನು ರಾಶಿ: ಇಂದು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹಣವನ್ನು ಖರ್ಚುಮಾಡಬೇಕಾಗುವುದು. ನಿಮ್ಮನ್ನು ನೀವೇ ಏಕಾಂಗಿ ಎಂದು ಲೆಕ್ಕಿಸುವುದು ಬೇಡ. ನಿಮ್ಮ ವೃತ್ತಿಜೀವನವನ್ನು ಮುನ್ನಡೆಸಲು ಮಾರ್ಗದರ್ಶನವನ್ನು ಪಡೆಯುತ್ತೀರಿ. ನಿಮ್ಮ ಕರ್ಮಗಳು ಇತರರಿಗೆ ಮಾದರಿಯಾದೀತು. ಯಾರ ಮಧ್ಯದಲ್ಲಿಯೂ ನೀವು ವಾದದ ನಿರ್ಣಾಯಕರಾಗಿ ಹೋಗಬೇಡಿ. ಸಂಗಾತಿಯ ತಪ್ಪುಗಳನ್ನು ಹೇಳುವ ರೀತಿಯಲ್ಲಿ ಹೇಳಿ. ನೋವಾಗದ ರೀತಿಯಲ್ಲಿ ಹೇಳಿದರೆ ಸಂಬಂಧವು ಚೆನ್ನಾಗಿರುವುದು. ಇರುವುದರಲ್ಲಿ ತೃಪ್ತಿ ಇರಲಿ. ಆಗದವರಿಗೆ ನೀವು ಇಂದು ಸಹಾಯ ಮಾಡಲಿದ್ದೀರಿ. ನಿಮ್ಮ ಗುಣಮಟ್ಟವನ್ನು ಕಾಯ್ದಿರಿಸಿಕೊಳ್ಳುವುದು ಕಷ್ಟವಾದೀತು. ಇಂದು ಶತ್ರುವಿನ ಆಗಲಿಕೆಯಿಂದ ಸಂತೋಷವಾಗುವುದು. ನಿಮ್ಮ ವಿದ್ಯಾಭ್ಯಾಸದ ಸಾಮರ್ಥ್ಯವನ್ನು ತೋರಿಸುವಿರಿ. ನಿಮ್ಮ ನಿಮಗೆ ಸಿಕ್ಕ ಬೆಂಬಲವನ್ನು ಇನ್ನೊಬ್ಬರಿಗೂ ಕೊಡುವ ಮನಸ್ಸು ಮಾಡಿ. ಅತಿಯಾದ ಸಲುಗೆಯಿಂದ ನಿಮಗೆ ತೊಂದರೆ ಆಗಬಹುದು.
ಮಕರ ರಾಶಿ: ನಿಮ್ಮ ನಕಾರಾತ್ಮಕ ಆಲೋಚನೆಗಳು ಅನ್ಯರ ಇಷ್ಟವಾಗದು. ನಿಮ್ಮ ಸಾಂಸಾರಿಕ ತೊಂದರೆಗೆ ನಿಮ್ಮ ಸಹೋದರ ಸಹೋದರಿಯರಿಂದ ಸರಿಯಾದ ಪರಿಹಾರವು ಪ್ರಾಪ್ತವಾಗಲಿದೆ. ನಿಮ್ಮ ಪ್ರಯತ್ನಕ್ಕೆ ಯೋಗ್ಯವಾದ ಫಲವು ಸಿಗಬಹುದು. ವೃತ್ತಿಯಲ್ಲಿ ಹೆಚ್ಚಿನ ಪ್ರಗತಿ ಇರಲಿದೆ. ದುಡುಕಿನ ನಿರ್ಧಾರದಿಂದ ದುಃಖಪಡಬೇಕಾದೀತು. ಶತ್ರುಗಳು ನಿಮ್ಮ ಸಂಪತ್ತನ್ನು ಕರಗಿಸಲು ತಂತ್ರವನ್ನು ಹೆಣೆಯಬಹುದು. ಕೆಳಸ್ತರದವರ ಜೊತೆ ಬಹಳ ಅಸಹ್ಯವಾಗಿ ನಡೆದುಕೊಳ್ಳುವುದು ಬೇಡ. ಇಂದಿನ ಕಛೇರಿಯ ಕೆಲಸದಲ್ಲಿ ಪೂರ್ಣ ಮನಸ್ಸು ಇರಲಾರದು. ಹಳೆಯ ಸ್ನೇಹಿತರನ್ನು ನೀವು ಭೇಟಿಯಾಗಿ ಎಲ್ಲ ಸಂಗತಿಗಳನ್ನು ಹಂಚಿಕೊಳ್ಳುವಿರಿ. ಚರಾಸ್ತಿಯ ವಿಷಯದಲ್ಲಿ ನೀವು ಅಸ್ವತಂತ್ರರಾಗಿ ಇರುವಿರಿ. ಮನೆಯ ಕಾರ್ಯದಲ್ಲಿ ನಿಮಗೆ ಒತ್ತಡವು ಅಧಿಕವಾಗಿ ಇರಲಿದೆ. ಯಾವುದೋ ಅಜ್ಞಾತ ಸಂಸ್ಥೆಯಲ್ಲಿ ಹಣ ಹೂಡಿಕೆಯನ್ನು ಮಾಡಲು ಹೋಗುವಿರಿ.
ಕುಂಭ ರಾಶಿ: ನೀವು ಅಗತ್ಯದ ಖರ್ಚುಗಳನ್ನೂ ನಿಯಂತ್ರಿಸಲು ಹೋಗಿ ಎಡವಟ್ಟು ಮಾಡಿಕೊಳ್ಳಬಹುದು. ಆಧ್ಯಾತ್ಮಿಕ ಮತ್ತು ಧಾರ್ಮಿಕ ಚಟುವಟಿಕೆಗಳಲ್ಲಿ ಸ್ವಲ್ಪ ಸಮಯವನ್ನು ಕಳೆದು ನೆಮ್ಮದಿಯನ್ನು ಪಡೆಯುವಿರಿ. ವೈದ್ಯಕೀಯ ವಿದ್ಯಾರ್ಥಿಗಳಿಗೆ ಹೆಚ್ಚು ಶ್ರಮವಹಿಸಬೇಕಾದೀತು. ಪ್ರೀತಿಯಲ್ಲಿ ಆಕಸ್ಮಿಕ ತಿರುವಿನಿಂದ ಹತಾಶರಾಗುವಿರಿ. ಸ್ವತಂತ್ರವಾಗಿ ತೀರ್ಮಾನವನ್ನು ತೆಗದುಕೊಳ್ಳಲು ಕಷ್ಟವಾದರೂ ನೀವೇ ತೆಗೆದುಕೊಳ್ಳಿ. ನಿಮ್ಮ ಇಚ್ಛೆಗೆ ಅನುಸಾರವಾಗಿ ನಡೆಯುವುದು ಕಷ್ಟವಾಗುವುದು. ಇಂದು ಕಷ್ಟಕರವಾಗಿದ್ದರೂ ಪ್ರಯಾಣವನ್ನು ಮಾಡಲೇ ಬೇಕಾಗಿದೆ. ಬಂಧುಗಳ ಆಗಮನದಿಂದ ಮನೆಯಲ್ಲಿ ಸಂತಸದ ವಾತಾವರಣ ಇರಲಿದೆ. ನಿಮ್ಮ ಆರೋಗ್ಯದ ಸಮಸ್ಯೆಯನ್ನು ತಳ್ಳಿಹಾಕುವುದು ಬೇಡ. ಗುರಿಯ ಬಗ್ಗೆ ಸ್ಪಷ್ಟತೆ ಇಲ್ಲದಿರುವುದು ವೈಫಲ್ಯಕ್ಕೆ ಕಾರಣವಾಗುವುದು. ದುರ್ಬಲವಾದ ಮನಸ್ಸನ್ನು ನೀವು ಬಲಮಾಡಿಕೊಳ್ಳುವ ಅವಶ್ಯಕತೆ ಇರಲಿದೆ.
ಮೀನ ರಾಶಿ: ಇಂದು ಕಾರ್ಯದ ಸರಿಯಾದ ಫಲವನ್ನು ಪಡೆಯದಿದ್ದರೂ ಸಂಯಮದಿಂದ ವರ್ತಿಸಿ. ಯಾರಾದರೂ ಸಾಲವನ್ನು ಕೇಳಿ ಬರಬಹುದು. ನಯವಾಗಿ ತಳ್ಳಿಹಾಕುವಿರಿ. ಕೋಪಗೊಳ್ಳುವ ಬದಲು ಶಾಂತರೀತಿಯಿಂದ ಸಮಸ್ಯೆಯನ್ನು ಪರಿಹರಿಸಿ. ಸಮಸ್ಯೆಗಳು ಬಂದಾಗ ಉದ್ವೇಗಕ್ಕೆ ಒಳಗಗಾದೇ ಬಗೆಹರಿಸಿಕೊಳ್ಳಿ. ರಾಜಕೀಯ ವ್ಯಕ್ತಿಗಳ ಸಹವಾಸದಿಂದ ನಿಮ್ಮ ಕಾರ್ಯಗಳು ಸಲೀಸಾಗಿ ಆಗಲಿದೆ. ಅಪಮಾನವಾಗುವ ಘಟನೆಗಳು ನಡೆಯಬಹುದು. ಆರ್ಥಿಕ ಸಂಕಷ್ಟಕ್ಕೆ ನಿಮ್ಮ ಉಪಾಯಗಳನ್ನು ಆರಂಭಿಸುವಿರಿ. ಆಸ್ತಿ ವ್ಯವಹಾರದಲ್ಲಿ ಸ್ವಲ್ಪಮಟ್ಟಿಗೆ ಕಲಹಾದಿಗಳು ಆಗಿ ಬಗೆ ಹರಿಯುವುದು. ಉದ್ಯೋಗದ ಸ್ಥಳದಲ್ಲಿ ಸಹೋದ್ಯೋಗಿಗಳ ನೆರವು ಸಿಗಲಿದೆ. ಕುಟುಂಬದ ಜೊತೆ ಸಮಯವನ್ನು ಕಳೆಯಬೇಕು ಎಂದುಕೊಂಡರೂ ಅದು ಆಗದು. ನಿಮ್ಮ ಆತ್ಮೀಯವಾದ ಮಾತಿನಿಂದ ಅಪರಿಚಿತರ ಸ್ನೇಹವನ್ನು ಗಳಿಸುವಿರಿ.