ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಒಳನಾಡಿನ ಕೆಲವು ಭಾಗಗಳಲ್ಲಿ ಹಗುರದೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಹಲವು ಸ್ಥಳಗಳಲ್ಲಿ ಸಾಧಾರಣ ಮಳೆಯೊಂದಿಗೆ ಗುಡುಗು ಸಾಥ್ ನೀಡಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು, ವಿಜಯಪುರ, ಯಾದಗಿರಿಯ ಪ್ರತ್ಯೇಕ ಸ್ಥಳದಲ್ಲಿ ಹಗುರವಾದ ಮಳೆಯಾಗುವ ನಿರೀಕ್ಷೆ ಇದೆ. ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಸೇರಿದಂತೆ ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಆದರೆ ಗಾಳಿ ವೇಗವು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.