ಶಿವಮೊಗ್ಗ: ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ನಗರದ ಗೋಪಿ ಸರ್ಕಲ್‍ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಯಲ್ಲಿ ಅವರು ಭಾಗಿಯಾಗಿದ್ದಾಗ ತೀವ್ರ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಮೃತರ ಸ್ವಗ್ರಾಮ ಮತ್ತೂರಿಗೆ ಮೃತದೇಹವನ್ನು ರವಾನೆ ಮಾಡಲಾಗಿದೆ.