ಕಾರವಾರ: ಕಾರವಾರ-ಅಂಕೋಲಾ ಶಾಸಕಿ ರೂಪಾಲಿ ನಾಯ್ಕ ಗುರುವಾರ ಮನೆ ಮನೆಗೆ ತೆರಳಿ ಹರ್ ಘರ್ ತಿರಂಗಾ ಅಭಿಯಾನದ ಕುರಿತು ಜಾಗೃತಿ ಮೂಡಿಸಿದರು.
ದೇಶಾಭಿಮಾನದ ಪ್ರತೀಕವಾಗಿ, ಮನೆ ಮನೆಯಲ್ಲೂ ರಾಷ್ಟ್ರಧ್ವಜಾರೋಹಣ ನಡೆಸುವ ಹರ್ ಘರ್ ತಿರಂಗ ಕಾರ್ಯಕ್ರಮಕ್ಕೆ ಕೈಜೋಡಿಸುವಂತೆ ಶಾಸಕಿ ರೂಪಾಲಿ ಎಸ್. ನಾಯ್ಕ ಮನೆ ಮನೆಗೆ ತೆರಳಿ ರಾಷ್ಟ್ರಧ್ವಜ ವಿತರಿಸಿ, ವಿನಂತಿಸಿದರು. ರಾಷ್ಟ್ರಧ್ವಜವನ್ನು ಗೌರವಯುತವಾಗಿ ನೋಡಿ, ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿ ಧ್ವಜ ವಿತರಣೆಗೆ ಚಾಲನೆ ನೀಡಿದರು.