ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಕೊಲೆಗೆ ಯತ್ನ; ಕಾಮುಕ ಅರೆಸ್ಟ್​

ರಾಯಚೂರು, ಜೂ.22: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಬಳಿಕ ಕೊಲೆಗೆ ಯತ್ನಿಸಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿದೆ. 17 ವರ್ಷದ ಅಪ್ರಾಪ್ತೆ ಬಹಿರ್ದೆಸೆಗೆ ತೆರಳಿದ್ದ ವೇಳೆ ಆಕೆಯನ್ನ ಎಳೆದೊಯ್ದು ಪೊದೆಯೊಂದರಲ್ಲಿ ಅತ್ಯಾಚಾರವೆಸಗಿ ಬಳಿಕ ಕಲ್ಲಿನಿಂದ ಜಜ್ಜಿ ಹತ್ಯೆಗೈಯಲು ಯತ್ನಿಸಿದ್ದಾನೆ. ಇದೀಗ ಆರೋಪಿ ಬಸವರಾಜ್​ ಎಂಬಾತ​ನನ್ನ ಪೊಲೀಸರು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚೆಗಷ್ಟೇ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಪೆರ್ನೆಯ‌ ಬಿಳಿಯೂರು ಎಂಬಲ್ಲಿ ಚಿಕ್ಕಮ್ಮನ ಮೇಲೆಯೇ ಬಾಲಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿ, ಸಹಕರಿಸದ ಹಿನ್ನಲೆಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ  ನಡೆದಿತ್ತು. ಹೇಮಾವತಿ(37) ಕೊಲೆಯಾದ ಮಹಿಳೆ. ಜೂ.17 ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇನ್ನು ಮೊದಲು ಮನೆ ಮಂದಿ ಎಲ್ಲರೂ ಪೋಲೀಸರಿಗೆ ಹೃದಯಾಘಾತದಿಂದ ಸಾವು ಎನ್ನುವ ಮಾಹಿತಿ ನೀಡಿದ್ದರು. ಆದರೆ, ಮೃತದೇಹವನ್ನು ಪರಿಶೀಲಿಸಿದ ಸಂದರ್ಭದಲ್ಲಿ ಕೊಲೆಯಾಗಿರುವ ವಿಚಾರ ಬೆಳಕಿಗೆ ಬಂದಿತ್ತು. ವಿಚಾರಣೆಯ ವೇಳೆ ಬಾಲಕ ಕೃತ್ಯವನ್ನು ಒಪ್ಪಿಕೊಂಡಿದ್ದ. ಇದೀಗ ರಾಯಚೂರು ಜಿಲ್ಲೆಯಲ್ಲಿ ಇಂತಹ ಪ್ರಕರಣ ಬೆಳಕಿಗೆ ಬಂದಿದೆ.