ಇಂದಿನಿಂದ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನ ಕೊಡಗಿನಲ್ಲಿ ವರುಣನ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ಮೈಸೂರಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನುಳಿದಂತೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಅಂಕೋಲಾ, ಕುಮಟಾ, ಕಾರವಾರ, ಉಡುಪಿ, ಸಿದ್ದಾಪುರ, ಕೊಲ್ಲೂರು, ಕೋಟ, ಸಿದ್ದಾಪುರ, ಮಂಕಿ, ಶಿರಾಲಿ, ಕಾರ್ಕಳ, ಮಂಗಳೂರು, ಪಣಂಬೂರು, ಗೋಕರ್ಣ, ಮಂಗಳೂರು ವಿಮಾನ ನಿಲ್ದಾಣ, ಇಳಕಲ್, ಕುಂದಾಪುರ, ಸುಳ್ಯ, ಲೋಂಡಾ, ಔರಾದ್, ಹಾರಂಗಿ, ಕುಣಿಗಲ್, ಗುಬ್ಬಿ, ನಾಪೋಕ್ಲು, ಮುಲ್ಕಿ, ಮಾಣಿ, ಧರ್ಮಸ್ಥಳ, ಉಪ್ಪಿನಂಗಡಿ, ಬೆಳ್ತಂಗಡಿ, ಜೋಯ್ಡಾ, ಹುಕ್ಕೇರಿ, ಬಾಗಲಕೋಟೆ, ಸಂಕೇಶ್ವರ, ಬಿಳಗಿ, ಗಂಗಾವತಿ, ಆಗುಂಬೆ, ಮಧುಗಿರಿ, ಮಾಗಡಿ, ಕೊಪ್ಪ, ತ್ಯಾಗರ್ತಿ, ಚನ್ನಗಿರಿಯಲ್ಲಿ ಮಳೆಯಾಗಿದೆ.
ಇಂದು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಹಲವೆಡೆ ಮತ್ತು ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 64.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 33.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 – ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.