ಹೊನ್ನಾವರದಲ್ಲಿ ನಾಮಧಾರಿ ಹಿತರಕ್ಷಣಾ ವೇದಿಕೆ ವತಿಯಿಂದ ಬ್ರಹ್ಮಶ್ರೀ ನಾರಾಯಾಣ ಗುರುಗಳ ತತ್ವಗಳ ಉಪನ್ಯಾಸ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಹೊನ್ನಾವರ :- ಹೊನ್ನಾವರದ ನಾಮಧಾರಿ ಸಭಾಭವನದಲ್ಲಿ ನಾಮಧಾರಿ ಹಿತರಕ್ಷಣಾ ವೇದಿಕೆ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಗಳ ಬಗ್ಗೆ ಉಪನ್ಯಾಸ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಹಾಗೂ ವಿಶೇಷ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು..

ಕಾರ್ಯಕ್ರಮವನ್ನು ಶ್ರೀ ಸಿಗಂದೂರು ಚೌಡೇಶ್ವರಿ ದೇವಸನದ ಧರ್ಮದರ್ಶಿಗಳಾದ ರಾಮಪ್ಪ ದೀಪ ಬೆಳೆಗಿಸುವುದರ ಮೂಲಕ ಉದ್ಘಾಟಿಸಿದ್ರು. ಬಳಿಕ ಬ್ರಹ್ಮಶ್ರಿ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯ್ತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇದು ನಮ್ಮ ಮಕ್ಕಳಿಗೆ ಉತ್ತೇಜನ ನೀಡುವಂತಹ ಉತ್ತಮ ಕಾರ್ಯಕ್ರಮ. ಬ್ರಹ್ಮಶ್ರೀ ನಾರಾಯಣ ಗುರುಗಳ ವಾಕ್ಯವನ್ನು ಚಾಚು ತಪ್ಪದೇ ಪಾಲಿಸಿಕೊಂಡು ಬಂದಿದ್ದೇವೆ. ಇಂತಹ ಕಾರ್ಯಕ್ರಮಗಳಿಂದ ನಾಮಧಾರಿ ಸಮಾಜ ಮತ್ತಷ್ಟು ಸಂಘಟಿತವಾಗಿತ್ತದೆ. ನಮ್ಮ ಸಮಾಜದ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ಪಡೆದು ಮತ್ತಷ್ಟು ಸಾಧನೆ ಮಾಡುವಂತಾಗಲಿ ಎಂದು ಹೇಳಿದ್ರು..


ಈ ವೇಳೆ ಮುಖ್ಯ ಅತಿಥಿಗಳು ಹಾಗೂ ಉಪನ್ಯಾಸಕರಾಗಿ ಆಗಮಿಸಿದ ಹಿರಿಯ ಪತ್ರಕರ್ತರು ಹಾಗೂ ಲೇಖಕರಾದ ದಿನೇಶ ಅಮಿನಮಟ್ಟು ಮಾತನಾಡಿ, ನಾರಾಯಣ ಗುರುಗಳು ಬಯಸಿದ ಶಿಕ್ಷಣವೆಂದರೆ ಬೌದ್ಧಿಕ ದಾಸ್ಯದಿಂದ ಮುಕ್ತರಾಗುವುದು. ಮಕ್ಕಳ ಆಸಕ್ತಿಯನ್ನು ಗುರುತಿಸಿ ಅವರಿಗೆ ಯಾವ ಕ್ಷೇತ್ರದಲ್ಲಿ ಉತ್ಸಾಹವಿದೆಯೋ ಆ ಕ್ಷೇತ್ರದಲ್ಲಿ ಅವರನ್ನು ಬೆಳೆಸಿ. ಹೀಗಾಗಿ ನಾರಾಯಣ ಗುರುಗಳ ಬಯಸಿದ ರೀತಿಯಲ್ಲಿ ಸಮಾಜವನ್ನು ಮುಂದುವರೆಸಿಕೊಂಡು ಸಂಘಟಿಸಿಕೊಂಡು ಹೋಗುವುದ ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಹೇಳಿದ್ರು..


ಇದೇ ವೇಳೆ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ನಾಮಧಾರಿ ಹಿತರಕ್ಷಣಾ ವೇದಿಕೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಜೊತೆಗೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿಶೇಷ ಸಾಧಕರನ್ನು ಸಹ ಇದೇ ವೇಳೆ ವೇದಿಕೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯ್ತು..


ಇದೇ ವೇಳೆ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿಗಳನ್ನು ನಾಮಧಾರಿ ಹಿತರಕ್ಷಣಾ ವೇದಿಕೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯ್ತು..ಈ ವೇಳೆ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದ ವಿಕ್ರಮ ನಾಯ್ಕ, ಮುಖ್ಯ ಅತಿಥಿಗಳಾದ ಡಾ.ಎಚ್.ಆರ್ ನಾಯ್ಕ, ಸತೀಶ್.ಬಿ ನಾಯ್ಕ, ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರು ನುಡಿಸಿರಿ ವಾಹಿನಿಯ ಗೌರವ ಸಲಹೆಗಾರರಾದ ಜಿ.ಯು ಭಟ್ಟರು, ಹಾಗೂ ಜೆಡಿಎಸ್ ಮುಖಂಡರಾದ ಸೂರಜ್ ನಾಯ್ಕ ಸೋನಿ, ಹಾಗೂ ನಾಮಧಾರಿ ಹಿತರಕ್ಷಣಾ ವೇದಿಕೆಯ ಪದಾಧಿಕಾರಿಗಳು ಹಾಗೂ ಸಮಾಜ ಮುಖಂಡರು ಭಾಗಿಯಾಗಿದ್ರು…


ವಿಶ್ವ ಜೊತೆಗೆ ವಿರೇಶ ನುಡಿಸಿರಿ ನ್ಯೂಸ್ ಹೊನ್ನಾವರ