ಕೊಡಗಿನಲ್ಲಿ‌ ಪ್ರವಾಸಿಗರ ಮೇಲೆ‌ ಹಲ್ಲೆ; ಪುಂಡರ ಅಟ್ಟಹಾಸದ ದೃಶ್ಯ ಸ್ಥಳೀಯರ ಮೊಬೈಲ್​ನಲ್ಲಿ ಸೆರೆ

ಕೊಡಗು, ಜೂ.23: ಇನ್ನೇನು ಮಳೆಗಾಲ ಕೂಡ ಆರಂಭವಾಯಿತು, ಪ್ರಕೃತಿ ಸೊಬಗನ್ನ ಕಣ್ತುಂಬಿಕೊಳ್ಳಲು ಪ್ರವಾಸಿಗರು ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಾರೆ. ಅದರಂತೆ ಕೊಡಗಿನ ಪ್ರಕೃತಿ ಸೌಂದರ್ಯ ಸವಿಯಲು ಹೋಗಿದ್ದ ಪ್ರವಾಸಿಗರ ಮೇಲೆ‌ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ಸೋಮವಾರಪೇಟೆ ತಾಲ್ಲೂಕಿನ ಕೋಟೆಬೆಟ್ಟ ರಸ್ತೆಯಲ್ಲಿ ನಡೆದಿದೆ. ಪುತ್ತೂರಿನಿಂದ ಆಗಮಿಸಿದ್ದ ಕುಟುಂಬವೊಂದಕ್ಕೆ ಬೈಕ್‌ನಲ್ಲಿ ಆಗಮಿಸಿದ್ದ ಇಬ್ಬರು ಮನಸ್ಸಿಗೆ ಬಂದಂತೆ ಥಳಿಸಿದ್ದಾರೆ. ಕೃತ್ಯದ ದೃಶ್ಯ ಸ್ಥಳೀಯರ ಮೊಬೈಲ್​ನಲ್ಲಿ ಸೆರೆಯಾಗಿದೆ. ಇನ್ನು ಹಲ್ಲೆ ಬಳಿಕ ಪುಂಡರು ಬೈಕ್ ಬಿಟ್ಟು ಪರಾರಿಯಾಗಿದ್ದು, ಪ್ರವಾಸಿಗರು ಮಾದಾಪುರ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.