ರಾಯಚೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಕೇವಲ ಊಹಾಪೋಹ. ಯಾರೋ ಹೇಳಿದ ತಕ್ಷಣ ಸಿಎಂ ಬದಲಾವಣೆ ಆಗುವುದಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.
ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಬಳಿಕ ಮಾತನಾಡಿದ ವಿಜಯೇಂದ್ರ, ರಾಷ್ಟ್ರ ಹಾಗೂ ರಾಜ್ಯದ ಅಧ್ಯಕ್ಷರು ಸಿಎಂ ಮುಂದುವರಿಕೆ ಬಗ್ಗೆ ಹೇಳಿದ್ದಾರೆ. ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ. ಪಕ್ಷವನ್ನ ಮತ್ತೊಮ್ಮೆ ಅಧಿಕಾರಕ್ಕೆ ತರಲು ರಾಜ್ಯ ಪ್ರವಾಸ ಮಾಡುತ್ತೇವೆ. ರಾಜ್ಯ ನಾಯಕರೆಲ್ಲಾ ಸೇರಿ ಈ ಬಗ್ಗೆ ಅಂತಿಮ ರೂಪರೇಷೆ ಸಿದ್ದಪಡಿಸುತ್ತಾರೆ ಎಂದು ತಿಳಿಸಿದರು.
ತಂದೆಯವರು ಹಿಂದಿನಿಂದಲೂ ರಾಯರ ದರ್ಶನ ಪಡೆದುಕೊಂಡೇ ಒಳ್ಳೆಯ ಕೆಲಸಕ್ಕೆ ಮುಂದಾಗಿದ್ದಾರೆ.
ಹೀಗಾಗಿ ರಾಯರ ಆರಾಧನಾ ಸಂದರ್ಭದಲ್ಲಿ ಕುಟುಂಬ ಸಮೇತರಾಗಿ ಬಂದಿದ್ದೇವೆ ಎಂದು ಹೇಳಿದರು.