ನವದೆಹಲಿ: ದೇಶದ 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧನ್ಕರ್ ಪ್ರಮಾಣವಚನ ಸ್ವೀಕರಿಸಿದರು. ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಪರಾಷ್ಟ್ರಪತಿ ಧನ್ಕರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಈ ಮೂಲಕ ಅವರು ರಾಜ್ಯಸಭೆಯ ಸಭಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಆಗಸ್ಟ್ 6 ರಂದು ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಅಭ್ಯರ್ಥಿ ಮಾರ್ಗರೇಟ್ ಆಳ್ವ ಅವರನ್ನು ಪರಾಭವಗೊಳಿಸಿ ಗೆಲುವು ಸಾಧಿಸಿದ್ದರು. 1997ರ ನಂತರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಧನ್ಕರ್ ಅತೀ ಹೆಚ್ಚಿನ ಮತಗಳೊಂದಿಗೆ ಜಯ ಸಾಧಿಸಿದ್ದರು.