ಅಯೋಧ್ಯೆ: ಮೊದಲ ಮಳೆಗೆ ಸೋರಿದ ರಾಮ ಮಂದಿರದ ಗರ್ಭಗುಡಿಯ ಮೇಲ್ಛಾವಣಿ

ಉತ್ತರ ಪ್ರದೇಶದ  ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಾಮ ಮಂದಿರದ ಗರ್ಭಗುಡಿಯಲ್ಲಿ ಮೊದಲ ಮಳೆಗೆ ಮೇಲ್ಛಾವಣಿಯಿಂದ ನೀರು ತೊಟ್ಟಿಕ್ಕಲು ಶುರುವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಕುರಿತು ಮುಖ್ಯ ಅರ್ಚಕರಾದ ಸತ್ಯೇಂದ್ರ ದಾಸ್ ತಿಳಿಸಿದ್ದಾರೆ.

ದೇವಾಲಯದ ದೇವಾಲಯದ ನಿರ್ಮಾಣದಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದ ದಾಸ್, ಶನಿವಾರ ಮಧ್ಯರಾತ್ರಿ ತುಂತುರು ಮಳೆಯ ಬಳಿಕ ದೇವಾಲಯದ ಆವರಣದಿಂದ ಮಳೆನೀರು ಹರಿದು ಹೋಗಲು ಯಾವುದೇ ವ್ಯವಸ್ಥೆ ಇಲ್ಲ ಎಂದು ಆರೋಪಿಸಿದರು ಮತ್ತು ದೇವಾಲಯದ ಅಧಿಕಾರಿಗಳು ಅಗತ್ಯ ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಿದರು.

ಮೇಲ್ಛಾವಣಿಯಿಂದ ನೀರು ಸೋರಿಕೆಯಾದ ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ ನಂತರ, ದೇವಾಲಯದ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಅವರು ದೇವಾಲಯಕ್ಕೆ ಆಗಮಿಸಿ ಮೇಲ್ಛಾವಣಿಯನ್ನು ದುರಸ್ತಿ ಮಾಡಲು ಸೂಚನೆ ನೀಡಿದ್ದಾರೆ.

ಮಿಶ್ರಾ ಅವರು ದೇವಸ್ಥಾನದ ಕಾಮಗಾರಿ ಕುರಿತು ಮಾತನಾಡಿ, ಈ ವರ್ಷದ ಜುಲೈ ವೇಳೆಗೆ ಪೂರ್ಣಗೊಳ್ಳಲಿದೆ, ಡಿಸೆಂಬರ್‌ ವೇಳೆಗೆ ಮಂದಿರ ನಿರ್ಮಾಣ ಪೂರ್ಣಗೊಳ್ಳಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಶನಿವಾರ ಮಧ್ಯರಾತ್ರಿ ಸಂಭವಿಸಿದ ಮೊದಲ ಭಾರಿ ಮಳೆಯಲ್ಲಿ ದೇವಾಲಯದ ಗರ್ಭಗುಡಿಯ ಮೇಲ್ಛಾವಣಿಯಿಂದ ಭಾರೀ ನೀರಿನ ಸೋರಿಕೆಯಾಗಿದೆ. ರಾಮ ಲಲ್ಲಾನ ವಿಗ್ರಹದ ಮುಂದೆ ಅರ್ಚಕರು ಕುಳಿತುಕೊಳ್ಳುವ ಸ್ಥಳ ಮತ್ತು ವಿಐಪಿ ದರ್ಶನಕ್ಕೆ ಜನರು ಬರುವ ಸ್ಥಳದ ಮೇಲಿನ ಛಾವಣಿಯಿಂದ ಮಳೆ ನೀರು ಸೋರಿಕೆಯಾಗುತ್ತಿದೆ ಎಂದು ಅವರು ಹೇಳಿದರು.

ಜನವರಿ 22ರಂದು ರಾಮಮಂದಿರದ ಉದ್ಘಾಟನೆ ಕಾರ್ಯ ನಡೆದಿದೆ, ಆದರೆ ಮೊದಲ ಮಳೆಗೆ ದೇವಾಲಯ ಸೋರುತ್ತದೆ ಎಂದು ಯಾರೂ ಊಹೆ ಮಾಡಿರಲಿಲ್ಲ.