ಭಟ್ಕಳದಲ್ಲಿ ‘ಹರ್ ಘರ್ ತಿರಂಗಾ’ ಅಭಿಯಾನದ ಜಾಗೃತಿ ಜಾಥಾ

ಭಟ್ಕಳ: ತಾಲೂಕಾ ಆಡಳಿತ, ತಾಲೂಕಾ ಪಂಚಾಯತ, ಪಟ್ಟಣ ಪಂಚಾಯತ ಭಟ್ಕಳ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಅಮೃತಮಹೋತ್ಸವದ ಹರ್ ಘರ್ ತಿರಂಗಾ ಅಭಿಯಾನದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಸಹಾಯಕ ಆಯುಕ್ತೆ ಮಮತಾ ದೇವಿ ಧ್ವಜ ತೋರಿಸುವ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು 75 ನೇ ವರ್ಷ ಮುಗಿಸಿ 76 ನೇ ವರ್ಷದ  ಸ್ವಾತಂತ್ರ್ಯೋತ್ಸವ ಆಚರಿಸುವ ಸಂಭ್ರಮದಲ್ಲಿದ್ದೇವೆ. ಆ.15 ರಂದು ತಾಲೂಕಾ ಕ್ರೀಡಾಂಗಣದಲ್ಲಿ ಹೇಗೆ ಧ್ವಜಾರೋಹಣ ಮಾಡುತ್ತೇವೋ ಹಾಗೆಯೇ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸಬೇಕು. ಈ ಬಗ್ಗೆ ಜಾಗೃತಿ ಮೂಡಿಸಿ ಹೆಚ್ಚಿನ ಜನರಿಗೆ  ಕಾರ್ಯಕ್ರಮದ ಉದ್ದೇಶವೇನು, ಇದನ್ನು ಈ ಬಾರಿ ಏಕೆ ವಿಭಿನ್ನವಾಗಿ ಆಚರಣೆ ಮಾಡುತ್ತಿದ್ದೇವೆ ಎಂದು ಸಾರ್ವಜನಿರಿಗೆ ತಿಳುವಳಿಕೆ ಮೂಡಿಸಲು ತಾಲೂಕಿನ ಪ್ರತಿಯೊಂದು ಸರ್ಕಾರಿ ಕಚೇರಿಯ ಮುಖ್ಯಸ್ಥರು, ಸರ್ಕಾರಿ ನೌಕರರ ಸಂಘ ಹಾಗೂ ಶಾಲಾ ಮಕ್ಕಳು ಸೇರಿ ಈ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು.

ಇದಕ್ಕೂ ಪೂರ್ವದಲ್ಲಿ ತಾಲೂಕು ಆಡಳಿತ ಸೌಧದಿಂದ ಜಾಥಾ ಹೊರಟು ತಾಲೂಕಾ ಪಂಚಾಯತ ಇದುರಿನಿಂದ ಶಂಸುದ್ದಿನ್ ಸರ್ಕಲ್ ಮಾರ್ಗವಾಗಿ ಪುನಃ ತಾಲೂಕು ಆಡಳಿತ ಸೌಧಕ್ಕೆ ಬಂದು ಮುಕ್ತಾಯಗೊಂಡಿತು.

ಈ ಸಂದರ್ಭದಲ್ಲಿ ಸಹಾಯಕ ಆಯುಕ್ತೆ ಮಮತಾ ದೇವಿ ಜಿ.ಎಸ್. ತಹಸೀಲ್ದಾರ್ ಸುಮಂತ ಬಿ, ತಾಲೂಕಾ ಪಂಚಾಯತ ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಚಿಕ್ಕನಮನೆ, ಕ್ಷೇತ್ರ ಶಿಕ್ಷಣಾಧಿಕಾರಿ ದೇವಿಸಾದ ಮೊಗೇರ, ಪುರಸಭೆ ಮುಖ್ಯಾಧಿಕಾರಿ ಸುರೇಶ, ತಾಲೂಕಾ ಪಂಚಾಯತ್ ಮುಖ್ಯಾಧಿಕಾರಿ ದೇವರಾಜ್ ಚಿಕ್ಕನಮನೆ, ಭಟ್ಕಳ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮೋಹನ ನಾಯ್ಕ ಮುಂತಾದವರು ಉಪಸ್ಥಿತರಿದ್ದರು