ಭಟ್ಕಳ: ವಿವಿಧ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರವು ತಾಲೂಕಾಸ್ಪತ್ರೆಯಲ್ಲಿ ನಡೆಯಿತು. ತಾಲೂಕಾ ಆಸ್ಪತ್ರೆ ,ರಕ್ತ ನಿಧಿ ಕೇಂದ್ರ, ಉಡುಪಿ ಜಿಲ್ಲಾ ಆಸ್ಪತ್ರೆ, ತಾಲೂಕಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀರ ಸಂಘದ ಸಹಯೋಗದೊಂದಿಗೆ ಶಿಬಿರ ನಡೆಸಲಾಯಿತು.
ಬೆಳ್ಳಿಗ್ಗೆ 9.30 ರಿಂದ ಮಧ್ಯಾಹ್ನ 2 ಗಂಟೆ ತನಕ ನಡೆದ ರಕ್ತದಾನ ಶಿಬಿರದಲ್ಲಿ ಒಟ್ಟು 35 ಶಿಬಿರಾರ್ಥಿಗಳು ರಕ್ತದಾನ ಮಾಡಿದರು. ಈ ವೇಳೆ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಕೂಡ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡಿರುವುದು ವಿಶೇಷವಾಗಿತ್ತು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು, ತಾಲೂಕಾ ಆರೋಗ್ಯಾಧಿಕಾರಿ ಡಾ. ಸವಿತಾ ಕಾಮತ್, ಪ್ರದಾನ ಸಿವಿಲ್ ನ್ಯಾಯಾಧೀಶ ವಿನೋದ ಬಾಳ ನಾಯ್ಕ, ವಕೀಲ ಸಂಘದ ಅಧ್ಯಕ್ಷರಾದ ಪಿ.ಜಿ ನಾಯ್ಕ, ಉಡುಪಿ ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ವೀಣಾ ಕುಮಾರಿ ಉಪಸ್ಥಿತರಿದ್ದರು.