ಬೆಂಗಳೂರು: ಸಿಎಂ ಹಾಗೂ ಡಿಸಿಎಂ ಸ್ಥಾನದ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಈ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಚಾರ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ, ಡಿಸಿಎಂ ಹುದ್ದೆ ಕುರಿತು ನಡೆಯುತ್ತಿರುವ ಚರ್ಚೆಯ ಬಗ್ಗೆ ಪ್ರತಿಕ್ರಿಯೆ ನೀಡಿದರು. ಈ ವೇಳೆ, ಸಿಎಂ ಹಾಗೂ ಡಿಸಿಎಂ ಹುದ್ದೆಯ ವಿಷಯ ಸಾರ್ವಜನಿಕವಾಗಿ ಚರ್ಚೆ ಮಾಡುವಂತಹದ್ದಲ್ಲ. ನಮ್ಮದು ಹೈಕಮಾಂಡ್ ಪಕ್ಷ. ಹೈಕಮಾಂಡ್ ಈ ಬಗ್ಗೆ ಎಲ್ಲಾ ತೀರ್ಮಾನ ಮಾಡುತ್ತದೆ ಎಂದಿದ್ದಾರೆ.
ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ಅದರಂತೆ ನಾವು ನಡೆದುಕೊಳ್ಳುತ್ತೇವೆ. ಇದರಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ಹರಿಪ್ರಸಾದ್ರನ್ನ ಸಿಎಂ ಮಾಡಬೇಕು ಎಂಬ ಪ್ರಣವಾನಂದ ಸ್ವಾಮೀಜಿ ಹೇಳಿಕೆ ವಿಚಾರಕ್ಕೆ ನಾನು ಯಾವ ಪ್ರತಿಕ್ರಿಯೆಯನ್ನು ಕೊಡುವುದಿಲ್ಲ ಎಂದು ಅವರು ಹೇಳಿದ್ದಾರೆ.