ಈಗಾಗಲೇ ಮುಂಗಾರು ಆರಂಭವಾಗಿ ತಿಂಗಳು ಕಳೆದಿದೆ, ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೇ ಭಾಗಗಳಲ್ಲಿ ಸ್ವಲ್ಪ ಮಳೆಯಾಗಿದೆ. ಅದನ್ನು ಹೊರತು ಪಡಿಸಿ ಮಳೆಯ ಪ್ರಮಾಣ ಕಡಿಮೆ ಎಂದೇ ಹೇಳಬಹುದು. ಜುಲೈ 9ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜುಲೈ 7ರ ಬಳಿಕ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನುಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಎಲ್ಲೆಲ್ಲಿ ಹೆಚ್ಚು ಮಳೆಯಾಗಿದೆ?
ಕೊಲ್ಲೂರು, ಸಿದ್ದಾಪುರ, ಕೊಟ್ಟಿಗೆಹಾರ, ಕೋಟ, ಆಗುಂಬೆ, ಧರ್ಮಸ್ಥಳ, ಉಡುಪಿ, ಲಿಂಗನಮಕ್ಕಿಯಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಭಾಗಮಂಡಲ, ಉಪ್ಪಿನಂಗಡಿ, ಕದ್ರಾ, ಸಿದ್ದಾಪುರ, ಶಿರಾಲಿ, ಮಂಗಳೂರು ವಿಮಾನ ನಿಲ್ದಾಣ, ಕುಂದಾಪುರ, ಮಂಗಳೂರು, ಮಾಣಿ, ನಾಪೋಕ್ಲು, ಪೊನ್ನಂಪೇಟೆ, ಗೇರುಸೊಪ್ಪ, ಬೆಳ್ತಂಗಡಿ, ಮಂಕಿ, ಪುತ್ತೂರು, ಕಿರವತ್ತಿ, ಯಲ್ಲಾಪುರ, ಕಮ್ಮರಡಿ, ಕಳಸ, ಹುಂಚದಕಟ್ಟೆ, ಕೊಪ್ಪ, ಶೃಂಗೇರಿ, ಮೂರ್ನಾಡು, ಗೋಕರ್ಣ, ತಾಳಗುಪ್ಪ, ಅಂಕೋಲಾ, ಹೊನ್ನಾವರದಲ್ಲಿ ಮಳೆಯಾಗಿದೆ.
ಚಿಕ್ಕಮಗಳೂರು, ಸೋಮವಾರಪೇಟೆ, ಗೌರಿಬಿದನೂರು, ಬಂಡೀಪುರ, ಅರಕಲಗೂಡು, ಕುಮಟಾ, ಮುಲ್ಕಿ, ಹಾವೇರಿ, ರಾಯಲ್ಪಾಡು, ಬೇಲೂರು, ಕೊಟ್ಟೂರು, ಎನ್ಆರ್ ಪುರ, ಮಾಗಡಿ, ದಾವಣಗೆರೆ, ತರೀಕೆರೆಯಲ್ಲೂ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್ಎಎಲ್ನಲ್ಲಿ 27.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 31.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.