ಹೊನ್ನಾವರ, ಜುಲೈ-03 : ಹೊನ್ನಾವರ ಪಟ್ಟಣ ಪಂಚಾಯತಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಇ ಸ್ವತ್ತು ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಇಬ್ಬರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ…
ಇಸ್ವತ್ತು ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಹೊನ್ನಾವರ ಪ.ಪಂ.ಮುಖ್ಯಾಧಿಕಾರಿ ಪ್ರವೀಣಕುಮಾರ ನಾಯಕ ಹಾಗೂ ಪ.ಪಂ.ಸದಸ್ಯ ವಿಜಯ ಕಾಮತ್ ಇರ್ವರು ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಉದ್ಯಮನಗರದ ನಿವಾಸಿಗಳಾದ ದಾಮೋದರ ಮಂಜುನಾಥ ನಾಯ್ಕ, ಕಲ್ಯಾಣಿ ಮಂಜುನಾಥ ನಾಯ್ಕ ಇವರಿಗೆ ಇಸ್ವತ್ತು ಮಾಡಿಕೊಡಲು 2 ಲಕ್ಷ ಆರಂಭದಲ್ಲಿ ಬೇಡಿಕೆ ಇಟ್ಟಿದ್ದು, ನಂತರ ಸದಸ್ಯ ವಿಜಯ ಕಾಮತ್ ಮೂಲಕ 60 ಸಾವಿರ ವ್ಯವಹಾರ ಕುದುರಿಸಿ ಲಂಚ ಸ್ವೀಕರಿಸುವಾಗ ಬಲೆ ಬಿದ್ದಿದ್ದಾರೆ.
ಲೋಕಾಯುಕ್ತ ಎಸ್‌ಪಿ ಕುಮಾರ್ ಚಂದ್ ಮಾರ್ಗದರ್ಶನದಲ್ಲಿ ಕಾರವಾರದ ಲೋಕಾಯುಕ್ತ ಇನ್ಸ್‌ಪೆಕ್ಟರ್ ವಿನಾಯಕ್ ಬಿಲ್ಲವರವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಹಣಸಮೇತ ವಶಕ್ಕೆ ಪಡೆದು ದಾಖಲೆ ಪರಿಶೀಲಿಸುತ್ತಿದ್ದಾರೆ. ಈ ಬಗ್ಗೆ ಕಾರವಾರ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..