ಶಿವಮೊಗ್ಗದಲ್ಲಿ ಕಾರುಗಳ ನಡುವೆ ಭೀಕರ ಅಪಘಾತ; ಮೂವರು ಸಾವು, ಮತ್ತಿಬ್ಬರು ಗಂಭೀರ

ಶಿವಮೊಗ್ಗ: ಶಿವಮೊಗ್ಗದಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಶಿವಮೊಗ್ಗ ತಾಲೂಕಿನ ಮುದ್ದಿನಕೊಪ್ಪ ಟ್ರೀ ಪಾರ್ಕ್ ಬಳಿ ಘಟನೆ ನಡೆದಿದೆ. ಇನೋವಾ ಕಾರು ಹಾಗೂ ಸ್ವೀಪ್ಟ್ ಕಾರು ನಡುವೆ ಡಿಕ್ಕಿಯಾಗಿದ್ದು, ಎರಡು ಕಾರುಗಳು ಛಿದ್ರ ಛಿದ್ರಗೊಂಡಿವೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರಿಗೆ ಗಂಭೀರ ಗಾಯವಾಗಿದೆ.

ಗಾಯಾಳುಗಳು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಕುಂಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತರ ಗುರುತುಗಳು ಇನ್ನೂ ಪತ್ತೆಯಾಗಿಲ್ಲ. ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದ್ದ ಕಾರುಗಳನ್ನು ತೆರವು ಮಾಡಲಾಗಿದೆ. ಮೇಲ್ನೋಟಕ್ಕೆ ಅತಿ ವೇಗ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.