ಕರ್ನಾಟಕದ ಕರಾವಳಿಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದೆ. ಅಷ್ಟೇ ಅಲ್ಲದೆ ಮಲೆನಾಡಿನಲ್ಲೂ ಮಳೆ ಜೋರಾಗಿದೆ. ಶನಿವಾರ ಕೊಂಚ ಬಿಡುವು ಪಡೆದಿದ್ದ ಮಳೆ ಭಾನುವಾರದಿಂದ ಮತ್ತಷ್ಟು ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿಯಲ್ಲೂ ಭಾರಿ ಮಳೆಯಾಗುವ ನಿರೀಕ್ಷೆ ಇದೆ.
ಇನ್ನುಳಿದಂತೆ ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಹೆಚ್ಚು ಮಳೆಯಾಗಲಿದೆ.
ಕ್ಯಾಸಲ್ರಾಕ್, ಹೊನ್ನಾವರ, ಉಡುಪಿ,ಅಂಕೋಲಾದಲ್ಲಿ ಹೆಚ್ಚಿನ ಮಳೆಯಾಗಿದೆ. ಕೋಟ, ಗೋಕರ್ಣ, ಸಿದ್ದಾಪುರ, ಶಿರಾಲಿ, ಮಂಕಿ, ಲೋಂಡಾ, ಕೊಟ್ಟಿಗೆಹಾರ, ಆಗುಂಬೆ, ಗೇರುಸೊಪ್ಪ, ಬೆಳ್ತಂಗಡಿ, ಧರ್ಮಸ್ಥಳ, ಕದ್ರಾ, ಕಾರ್ಕಳ, ಹುಂಚದಕಟ್ಟೆ, ಜೋಯಿಡಾ, ಕಾರವಾರ, ಸಿದ್ದಾಪುರ, ಕುಮಟಾ, ಲಿಂಗನಮಕ್ಕಿಯಲ್ಲಿ ಮಳೆಯಾಗಿದೆ.
ಕುಂದಾಪುರ, ಭಾಗಮಂಡಲ, ಉಪ್ಪಿನಂಗಡಿ, ಶೃಂಗೇರಿ, ಮಾಣಿ, ಯಲ್ಲಾಪುರ, ಮುಲ್ಕಿ, ಜಯಪುರ, ಮಾಣಿ, ಯಲ್ಲಾಪುರ, ಕೊಪ್ಪ, ದಾವಣಗೆರೆ, ಮೂರ್ನಾಡು, ನಾಪೊಕ್ಲು, ಹಳಿಯಾಳ, ಸುಳ್ಯ, ಮಂಗಳೂರು, ಹಾವೇರಿ, ಯಡ್ರಾಮಿ, ಬೆಳಗಾವಿಯಲ್ಲಿ ಮಳೆಯಾಗಿದೆ.
ಎಚ್ಎಎಲ್ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 28.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.