ಕಿರವತ್ತಿಯಲ್ಲೊ ಡೆಂಗ್ಯೂ ಜಾಗೃತಿ‌ ಮಾಹಿತಿ ಕಾರ್ಯಾಗಾರ

ಯಲ್ಲಾಪುರ : ಡೆಂಗ್ಯೂ ಜಾಗೃತಿ ಹಾಗೂ ವಿಶ್ವ ಪ್ರಾಣಿಜನ್ಯ ರೋಗಗಳ ದಿನಾಚರಣೆ ಅಂಗವಾಗಿ ಕಿರವತ್ತಿ ಗ್ರಾಮ ಪಂಚಾಯತ ಸಭಾಭವನದಲ್ಲಿ ಮಾಹಿತಿ ಕಾರ್ಯಗಾರ ನಡೆಯಿತು. ಗ್ರಾಮ ಪಂಚಾಯತ ಅಧ್ಯಕ್ಷೆ ಸಂಗೀತಾ ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು.

ಡೆಂಗ್ಯೂ ನಿಯಂತ್ರಣ ಕುರಿತು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ ತಾಳಿಕೋಟಿಯವರು ಮಾತನಾಡಿ, ” ಪ್ರತಿ ಶುಕ್ರವಾರ ಈಡೀಸ್‌ ಲಾರ್ವಾ ಉತ್ಪತ್ತಿ ತಾಣಗಳ ನಾಶ ಚಟುವಟಿಕೆಗಳ ದಿನ ಎಂದು ಎಲ್ಲ ಚುನಾಯಿತ ಪ್ರತಿನಿಧಿಗಳೊಂದಿಗೆ ಸೇರಿ ಆಶಾ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಕಾರ್ಯನಿರ್ವಹಿಸಬೇಕು” ಎಂದರು.

ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಯು. ಜೋಸೆಫ್‌ ಅವರು ಸೊಳ್ಳೆ ನಿಯಂತ್ರಣ ಹಾಗೂ ಸ್ವಯಂ ರಕ್ಷಣಾ ವಿಧಾನಗಳ ಕುರಿತು ಹಾಗೂ ಪ್ರಾಣಿಜನ್ಯ ರೋಗಗಳ ಕುರಿತಾಗಿ ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿ ಎಸ್.‌ ಟಿ. ಭಟ್ಟ ಮಾಹಿತಿ ನೀಡಿದರು. ಡೆಂಗ್ಯೂ ಇತರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣದಲ್ಲಿ ಸಾರ್ವಜನಿಕರು ಕೈ ಜೋಡಿಸಬೇಕೆಂದು ಪಿಡಿಒ ಅಣ್ಣಪ್ಪ ವಡ್ಡರ ಹೇಳಿದರು.