ಹಾವೇರಿ: ಸದ್ಯ ಡೆಡ್ಲಿ ಡೆಂಗ್ಯೂ ಪ್ರಕರಣ ದಿನೇ ದಿನೇ ಹೆಚ್ಚಾಗುತ್ತಿದೆ. ಈ ಹೊತ್ತಿನಲ್ಲೇ ಇಲಿ ಜ್ವರದಿಂದ ಹಾವೇರಿಯ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಇದು ಇಲಿಜ್ವರಕ್ಕೆ ರಾಜ್ಯದಲ್ಲಿ ಸಂಭವಿಸಿದ ಮೊದಲ ಬಲಿಯಾಗಿದೆ.
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅರಳೇಶ್ವರ ಗ್ರಾಮದ ವೃದ್ಧ ಉಮೇಶ್ (72) ಇಲಿಜ್ವರದಿಂದ ಸಾವನ್ನಪ್ಪಿದ್ದಾರೆ. 15 ದಿನಗಳಿಂದ ಹಾವೇರಿ, ಮಂಗಳೂರು ಸೇರಿ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳೂರಿನಲ್ಲಿ ರಕ್ತ ಪರೀಕ್ಷೆ ಬಳಿಕ ಇಲಿ ಜ್ವರ ಇರುವುದು ಪತ್ತೆಯಾಗಿದೆ.
ವೃದ್ಧ ಕಿಡ್ನಿ ವೈಫಲ್ಯದೊಂದಿಗೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ 2 ದಿನ ಚಿಕಿತ್ಸೆ ಪಡೆದ ನಂತರ ವೃದ್ಧ ಮೃತಪಟ್ಟಿದ್ದಾರೆ. ಇದರಿಂದ ಹಾವೇರಿ ಜಿಲ್ಲೆ ಜನರಲ್ಲಿ ಆತಂಕ ಮನೆಮಾಡಿದೆ.