ಕರ್ನಾಟಕದ ಕರಾವಳಿಯಲ್ಲಿ ಮಳೆ ಮುಂದುವರೆಯಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಗದಗ, ಕಲಬುರಗಿ, ಯಾದಗಿರಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನದಲ್ಲಿ ಭಾರಿ ಮಳೆಯಾಗಲಿದೆ.
ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ಕೋಟ, ಉಡುಪಿ, ಕಾರ್ಕಳ, ಮುಲ್ಕಿ, ಮಾಣಿ, ಪಣಂಬೂರು, ಉಪ್ಪಿನಂಗಡಿ, ಕುಮಟಾ, ಬ್ರಹ್ಮಾವರ, ಶಿರಾಲಿ, ಆಗುಂಬೆ, ಮಂಗಳೂರು, ಧರ್ಮಸ್ಥಳ, ಗೇರುಸೊಪ್ಪ, ಬೆಳ್ತಂಗಡಿ, ಕ್ಯಾಸಲ್ರಾಕ್, ಮಂಕಿಯಲ್ಲಿ ಮಳೆಯಾಗಿದೆ. ಹೊನ್ನಾವರ, ಸಿದ್ದಾಪುರ, ಶೋರಾಪುರ, ಕಮಲಾಪುರ, ತ್ಯಾಗರ್ತಿ, ಮಾಗಡಿ, ಕೊಪ್ಪ, ಸುಳ್ಯ, ದೇವರಹಿಪ್ಪರಗಿ, ಜೇವರ್ಗಿ, ಮಸ್ಕಿ, ಹುಮನಾಬಾದ್, ಶೃಂಗೇರಿ, ಹಗರಿಬೊಮ್ಮನಹಳ್ಳಿ, ಕದ್ರಾ, ಮುನಿರಾಬಾದ್, ಕೂಡಲಸಂಗಮ, ಅಡಕಿ, ಧಾರವಾಡ, ಸಿಂಧನೂರು, ಕೃಷ್ಣರಾಜಪೇಟೆ, ಹುಂಚದಕಟ್ಟೆ, ಬಾಳೆಹೊನ್ನೂರು, ಎನ್ಆರ್ಪುರ, ಮೂರ್ನಾಡು, ತುಮರಿ, ಗುಬ್ಬಿ, ದಾವಣಗೆರೆ, ಉತ್ತರಹಳ್ಳಿಯಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಮಳೆಯಾಗಲಿದೆ, ಎಚ್ಎಎಲ್ನಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 25.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಶಿರಾಲಿಯಲ್ಲಿ 28.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೀದರ್ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 – ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.