ಕರ್ನಾಟಕದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದೆ. ಅದನ್ನು ಹೊರತುಪಡಿಸಿ ಉತ್ತರ ಒಳನಾಡಿನಲ್ಲೂ ಮಳೆ ಶುರುವಾಗಿದೆ. ಜುಲೈ 13ರಿಂದ ಮೂರು ದಿನಗಳ ಕಾಲ 13 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸುರಿಯಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಉಪ್ಪಿನಂಗಡಿ, ಮಂಗಳೂರು ವಿಮಾನ ನಿಲ್ದಾಣ, ಕೋಟ, ಮಂಗಳೂರು, ಮಾಣಿ, ಉಡುಪಿ, ಪಣಂಬೂರು, ಧರ್ಮಸ್ಥಳ, ಬೆಳ್ತಂಗಡಿ, ಕಾರ್ಕಳ, ಕೊಟ್ಟಿಗೆಹಾರ, ಕಳಸ, ಶಿರಾಲಿ, ಕುಂದಾಪುರ, ಮುಲ್ಕಿ, ಕಾರವಾರ, ಜೋಯಿಡಾ, ಪುತ್ತೂರು, ಭಾಗಮಂಡಲ, ಕದ್ರಾ, ಮುದಗಲ್, ಪೊನ್ನಂಪೇಟೆ, ಶೃಂಗೇರಿ, ಬೇಲೂರು, ಹುಂಚದಕಟ್ಟೆಯಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಧ್ಯಾಹ್ನದ ಬಳಿಕ ಮಳೆಯಾಗುವ ನಿರೀಕ್ಷೆ ಇದೆ. ಎಚ್ಎಎಲ್ನಲ್ಲಿ 26.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 27.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 28.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 28.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ವಿಜಯಪುರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 30.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.