ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಕಾರ್ಯಕ್ರಮ

ಯಲ್ಲಾಪುರ: ಬಿಜೆಪಿಯ ತಾಲೂಕಾ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಕಾರ್ಯಕ್ರಮವನ್ನು ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿಗಳಿಗೆ ರಾಖಿಯನ್ನು ಕಟ್ಟುವ ಮೂಲಕ ಆಚರಣೆ ಮಾಡಲಾಯಿತು.

ಈ ವೇಳೆ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚಂದ್ರಕಲಾ ಭಟ್ಟ , ತಾಲೂಕಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರುತಿ ಹೆಗಡೆ, ಪ್ರಧಾನ ಕಾರ್ಯದರ್ಶಿ ಸವಿತಾ ಗಾಂವಕರ, ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುನಂದಾ ದಾಸ, ಶಾಮಿಲಿ ಪಾಟಣಕರ, ನಮಿತಾ ಬಿಡಿಕರ ಹಾಗೂ ಇತರರು ಭಾಗವಹಿಸಿದ್ದರು.